ರಾಷ್ಟ್ರೀಯ

ತ್ರಿಪುರಾ: ಬಿಜೆಪಿ ಅಧಿಕಾರಕ್ಕೆ ಬಂದ 48 ಗಂಟೆಗಳಲ್ಲಿ ಲೆನಿನ್ ಪ್ರತಿಮೆ ಧ್ವಂಸ!

Pinterest LinkedIn Tumblr

ತ್ರಿಪುರಾ: ತ್ರಿಪುರಾದಲ್ಲಿ ಅಚ್ಚರಿಯ ರೀತಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಅಧಿಕಾರಕ್ಕೆ ಬಂದ 48 ಗಂಟೆಗಳಲ್ಲಿ ರಷ್ಯಾದ ಕಮ್ಯುನಿಸ್ಟ್ ನಾಯಕ ವ್ಲಾದಿಮಿರ್ ಲೆನಿನ್ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ.

ರಾಜ್ಯದ ಬೆಲೋನಿಯಾ ಎಂಬ ಪ್ರದೇಶದಲ್ಲಿ ಲೆನಿನ್ ಪುತ್ಥಳಿಯನ್ನು ನಿರ್ಮಾಣ ಮಾಡಲಾಗಿತ್ತು. ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಈ ಪುತ್ಥಳಿಯನ್ನು ಸ್ಥಳೀಯರು ಧ್ವಂಸ ಮಾಡುತ್ತಿರುವ ವಿಡಿಯೋ ಈಗ ವೈರಲ್ ಆಗಿದ್ದು, ಧ್ವಂಸ ಮಾಡುತ್ತಿರುವವರು ಭಾರತ್ ಮಾತಾ ಕಿ ಜೈ ಘೋಷಣೆಗಳನ್ನು ಕೂಗಿದ್ದಾರೆ.

ಲೆನಿನ್ ಪ್ರತಿಮೆಯನ್ನು ಧ್ವಂಸಗೊಳಿಸಿರುವುದರ ಬಗ್ಗೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಪ್ರತಿಕ್ರಿಯೆ ನೀಡಿದ್ದು, ತ್ರಿಪುರಾದಲ್ಲಿದ್ದ ರಷ್ಯಾ ಕಮ್ಯುನಿಸ್ಟ್ ನಾಯಕ ವ್ಲಾದಿಮಿರ್ ಲೆನಿನ್ ಪ್ರತಿಮೆ ಧ್ವಂಸ ಮಾಡಿರುವುದು ರಾಜ್ಯದ ಜನತೆ ಬಯಸುತ್ತಿರುವ ಬದಲಾವಣೆಯ ಪ್ರತೀಕವಾಗಿದೆ ಎಂದು ಹೇಳಿದ್ದಾರೆ.

ತ್ರಿಪುರಾದಲ್ಲಿನ ಬಿಜೆಪಿ ಗೆಲುವು “ರಾಜ್ಯದಲ್ಲಿ ಕಾರ್ಲ್ ಮಾರ್ಕ್ಸ್ ವ್ಲಾದಿಮಿರ್ ಲೆನಿನ್ ನಂತಹವರು ಆದರ್ಶಗಳಿಗೆ ಅಂಕುಶ ಹಾಕುವುದಕ್ಕೆ ಮುನ್ನುಡಿ ಎಂದು ಬಿಜೆಪಿ ಹೇಳಿತ್ತು.

Comments are closed.