ಗಲ್ಫ್

ದುಬೈಯಲ್ಲಿ ಹೋಟೆಲೊಂದರ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಉಡುಪಿ ಮೂಲದ ಯುವಕ

Pinterest LinkedIn Tumblr

ದುಬೈ: ಉಡುಪಿ ಮೂಲದ ಯುವಕನೋರ್ವ ದುಬೈಯಲ್ಲಿ ಶನಿವಾರ ರಾತ್ರಿ ಹೋಟೆಲೊಂದರ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ರಾಘವೇಂದ್ರ ಭಂಡಾರಿ (35) ಎಂದು ಗುರುತಿಸಲಾಗಿದ್ದು, ಉಡುಪಿಯ ಕೊಳಂಬೆ ನಿವಾಸಿಯಾಗಿದ್ದಾನೆ.

ಕಳೆದ ಕೆಲವು ವರ್ಷಗಳಿಂದ ರಾಘವೇಂದ್ರ ದುಬೈಯಲ್ಲಿ ಕೆಲಸ ಮಾಡಿಕೊಂಡಿದ್ದ. ದುಬೈಯ ಹೋಟೆಲೊಂದರಲ್ಲಿ ತಂಗಿದ್ದ ಈತ ಶನಿವಾರ ಮನೆಯವರೊಂದಿಗೆ ಮಾತನಾಡಿದ್ದು, ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದ ಎನ್ನಲಾಗಿದೆ.

ಇದಾದ ಬಳಿಕ ಹೋಟೆಲೊಂದರ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವೈಯಕ್ತಿಕ ಕಾರಣದಿಂದ ಮನನೊಂದು ಈ ಕೃತ್ಯ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು, ಸ್ಪಷ್ಟ ಕಾರಣ ಇನ್ನು ತಿಳಿದುಬಂದಿಲ್ಲ.

Comments are closed.