ಮಸ್ಕತ್: ಕರ್ನಾಟಕದಲ್ಲಿ ಭರ್ಜರಿ ಹಿಟ್ ಕಂಡ, ಮಾಧ್ಯಮಗಳ ಅಪಾರ ಮೆಚ್ಚುಗೆಗೆ ಪಾತ್ರವಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ ACME ಮೂವೀಸ್ ಇಂಟರ್ನ್ಯಾಷನಲ್ ಬ್ಯಾನರಿನಡಿಯಲ್ಲಿ ಮಂಗಳೂರು ಮೂಲದ ದುಬೈಯ ಹೆಸರಾಂತ ಉದ್ಯಮಿ, ನಿರ್ಮಾಪಕರಾಗಿರುವ ಹರೀಶ್ ಶೇರಿಗಾರ್ ಮತ್ತು ಶರ್ಮಿಳಾ ಶೇರಿಗಾರ್ ಹಾಗು ‘ಐ’ ಎಂಟರ್ಟೈನ್ಮೆಂಟ್’ನ ವೈಭವಿ, ವೈನಿಧಿ ಮತ್ತು ವೈಸಿರಿ ನಿರ್ಮಿಸಿರುವ “ಯಾನ” ಕನ್ನಡ ಸಿನೆಮಾ ಆಗಸ್ಟ್ 2 ರ ಶುಕ್ರವಾರದಂದು ಒಮಾನಿನ ಮಸ್ಕತ್ತಿನಲ್ಲಿ ಬಿಡುಗಡೆಯಾಗಲಿದೆ.
ಒಮಾನಿನ ಮಸ್ಕತ್ತಿನ ಸಿಬಿಡಿ ರುವಿಯ ಸ್ಟಾರ್ ಸಿನೆಮಾ ಮಂದಿರದಲ್ಲಿ ಆಗಸ್ಟ್ 2 ರ ಶುಕ್ರವಾರದಂದು ಸಂಜೆ 5.30 ಹಾಗು ರಾತ್ರಿ 8.30 ಕ್ಕೆ ಪ್ರದರ್ಶನವಾಗಲಿದೆ.
ವಿಜಯ ಲಕ್ಷ್ಮಿ ಸಿಂಗ್ ಚಿತ್ರ ಕಥೆ ಬರೆದು ನಿರ್ದೇಶಿಸಿರುವ ಯಾನ ಚಿತ್ರ ಈಗಾಗಲೇ ಕರ್ನಾಟಕದ 100 ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಯಶಸ್ವಿ ಪ್ರದರ್ಶನವನ್ನು ಮುಂದುವರಿಸಿದೆ.
ಹಿರಿಯ ನಟ ಜೈಜಗದೀಶ್ ಹಾಗು ವಿಜಯ ಲಕ್ಷ್ಮಿ ಸಿಂಗ್ ಅವರ ಮಕ್ಕಳಾದ ವೈಭವಿ, ವೈನಿಧಿ ಹಾಗೂ ವೈಸಿರಿ ನಾಯಕಿಯರಾಗಿ ನಟಿಸಿದ್ದು, ಇವರಿಗೆ ಸುಮುಖ, ಚಕ್ರವರ್ತಿ ಹಾಗೂ ಅಭಿಷೇಕ್ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಒಂದು ಕಾಲದ ಹಾಟ್ ಫೇವರಿಟ್ ಜೋಡಿ ಅನಂತ್ ನಾಗ್ ಮತ್ತು ಸುಹಾಸಿನಿ ಈ ಸಿನೆಮಾದಲ್ಲಿ ಒಂದಾಗಿರುವುದು ಸಿನೆಮಾಕ್ಕೆ ಮತ್ತೊಂದು ಹೆಗ್ಗಳಿಕೆಯಾಗಿದೆ.
https://www.facebook.com/harish.sherigar.5/videos/10206350385394849/?t=3
ಇನ್ನುಳಿದಂತೆ ಚಿತ್ರದಲ್ಲಿ ಸಾಧುಕೋಕಿಲ, ರಂಗಾಯಣ ರಘು, ಚಿಕ್ಕಣ್ಣ, ರಾಮಕೃಷ್ಣ, ಸುಂದರರಾಜ್, ಗಡ್ದಪ್ಪ, ಸುಂದರ್, ವೀಣಾಸುಂದರ್, ಎಂ.ಎನ್.ಲಕ್ಷ್ಮೀದೇವಿ ಮುಂತಾದವರು ನಟಿಸಿದ್ದಾರೆ. ಸುಹಾಸ್ ಗಂಗಾಧರ್ ಚಿತ್ರಕಥೆ ಬರೆದಿದ್ದಾರೆ. ಸುನಿ ಹಾಗೂ ಅಭಿಷೇಕ್ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಜೋಶ್ವಾ ಶ್ರೀಧರ್ ಸಂಗೀತ ನೀಡಿದ್ದಾರೆ. ಕರ್ಮ್ ಚಾವ್ಲಾ ಅವರ ಛಾಯಾಗ್ರಹಣವಿದೆ.
ನಟಿಯರಾದ ವೈಭವಿ, ವೈನಿಧಿ, ವೈಸಿರಿ ಹಾಗು ನಾಯಕರಾದ ಸುಮುಖ, ಚಕ್ರವರ್ತಿ ಹಾಗೂ ಅಭಿಷೇಕ್ ನಟನೆಗೆ ಜನ ಫಿದಾ ಆಗಿದ್ದಾರೆ. ಜೊತೆಗೆ ಸಾಧುಕೋಕಿಲ, ರಂಗಾಯಣ ರಘು, ಚಿಕ್ಕಣ್ಣ, ರವಿ ಶಂಕರ್, ಓಂ ಪ್ರಕಾಶ್ ರಾವ್, ರಾಮಕೃಷ್ಣ, ಸುಂದರರಾಜ್, ಗಡ್ದಪ್ಪ ಅವರ ನಟನೆಯೂ ಚಿತ್ರಕ್ಕೆ ಮತ್ತಷ್ಟು ಗಟ್ಟಿತನವನ್ನು ತಂದಿದೆ.
ಹುಡುಗಿಯರ ಜೀವನದಲ್ಲಿ ಕೆಲವೊಂದು ಸಂದಿಗ್ಧ ಪರಿಸ್ಥಿತಿ ಉಂಟಾದಾಗ ಕೊನೆಗೆ ಕಾಣುವುದು ಆತ್ಮಹತ್ಯೆಯಂತ ಸಾವಿನ ಬಾಗಿಲು. ಆದರೆ ‘ಯಾನ’ದಲ್ಲಿ ಹುಡುಗಿಯರು ತಮಗೊದಗುವ ಕಷ್ಟದ ಸನ್ನಿವೇಶಗಳು, ವಿಚಾರಗಳನ್ನು ಮೆಟ್ಟಿ ನಿಂತು ಹೇಗೆ ಎದುರಿಸುತ್ತಾರೆ ಎಂಬುದನ್ನು ಎತ್ತಿ ತೋರಿಸಲಾಗಿದೆ. ಜೊತೆಗೆ ಕೊನೆಗೆ ಒಳ್ಳೆಯ ಸಂದೇಶವನ್ನು ಇಂದಿನ ಜನರಿಗೆ ನೀಡಲಾಗಿದೆ. ಒಟ್ಟಾರೆ ಸಿನೆಮಾ ಬಗ್ಗೆ ಎಲ್ಲ ಆಯಾಮಗಳಲ್ಲೂ ಉತ್ತಮ ಪ್ರತಿಕ್ರಿಯೆ, ಮೆಚ್ಚುಗೆ ವ್ಯಕ್ತವಾಗಿದೆ.
ಸಿನೆಮಾವನ್ನು ಚಿತ್ರದುರ್ಗ, ದಾವಣಗೆರೆ, ಮೂಡಿಗೆರೆ, ಉತ್ತರಕರ್ನಾಟಕದ ಯಾನ ಸೇರಿದಂತೆ ಅನೇಕ ಸುಂದರ ತಾಣಗಳಲ್ಲಿ ಚಿತ್ರೀಕರಿಸಲಾಗಿದೆ. ಈ ಮೂಲಕ ಕರ್ನಾಟದಲ್ಲಿರುವ ಪ್ರವಾಸೋದ್ಯಮ ತಾಣಗಳನ್ನು ಮತ್ತಷು ಜನರಿಗೆ ಪರಿಚಯಿಸಿದೆ.
Comments are closed.