ಗಲ್ಫ್

ದುಬೈನಲ್ಲಿ ಸಂಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ ಇಬ್ಬರು ಭಾರತೀಯ ವಿದ್ಯಾರ್ಥಿಗಳ ಸಾವು

Pinterest LinkedIn Tumblr

ದುಬೈ: ಕ್ರಿಸ್ ಮಸ್ ದಿನವೇ ದುಬೈನಲ್ಲಿ ಸಂಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ ಇಬ್ಬರು ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತಂತೆ ಖಲೀಜ್ ಟೈಮ್ಸ್ ವರದಿ ಮಾಡಿದ್ದು, ಮೃತರನ್ನು ಕೇರಳ ಮೂಲದ ರೋಹಿತ್ ಕೃಷ್ಣಕುಮಾರ್ (19 ವರ್ಷ) ಮತ್ತು ಶರತ್ ಕುಮಾರ್ (21 ವರ್ಷ) ಎಂದು ಗುರುತಿಸಲಾಗಿದೆ. ಕೃಷ್ಣಕುಮಾರ್ ಬ್ರಿಟನ್ ನಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದು, ಶರತ್ ಕುಮಾರ್ ಅಮೆರಿಕದ ವಿವಿಯೊಂದರಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದಾರೆ. ಇಬ್ಬರೂ ದುಬೈನಲ್ಲಿ ಕ್ರಿಸ್ ಮಸ್ ರಜೆಕಳೆಯಲು ತೆರಳಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ದುಬೈ ಪೊಲೀಸರು ಭಾರತೀಯ ರಾಯಭಾರ ಕಚೇರಿಗೆ ಮಾಹಿತಿ ನೀಡಿದ್ದು, ಈ ಕುರಿತಂತೆ ವಿದೇಶಾಂಗ ಇಲಾಖೆ ಭಾರತದಲ್ಲಿರುವ ಅವರ ಕುಟುಂಬಸ್ಥರಿಗೆ ಮಾಹಿತಿ ನೀಡಿದೆ ಎನ್ನಲಾಗಿದೆ.

Comments are closed.