ಶ್ರೀನಗರ: ಜಮ್ಮ ಮತ್ತು ಕಾಶ್ಮೀರದ ಪೊಲೀಸರು ಹಾಗೂ ಭದ್ರತಾ ಪಡೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಶುಕ್ರವಾರ ಎನ್‌ಕೌಂಟರ್ ಮಾಡಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಕುಲಂಗಾವ್ ಗ್ರಾಮದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಪೊಲೀಸರು ಹಾಗೂ ಸೇನೆ ಜಂಟಿ ಕಾರ್ಯಾಚರಣೆ ನಡೆಸಲಾಯಿತು. ರಾತ್ರಿಯಿಡಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರರ ದಮನ ಕಾರ್ಯಾಚರಣೆಯಲ್ಲಿ ಪೊಲೀಸರು ಸೇರಿದಂತೆ 1ನೇ ರಾಷ್ಟ್ರೀಯ ರೈಫಲ್ ಮತ್ತು 18 ಬಿಎನ್ ಕೇಂದ್ರ ಮೀಸಲು ಪೊಲೀಸ್ ಪಡೆ ಜಂಟಿಯಾಗಿ ದಾಳಿ ನಡೆಸಿದೆ. ಇದರಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದು, ಅವರಿಂದ ಶಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.