ರಾಷ್ಟ್ರೀಯ

ಗಣರಾಜ್ಯೋತ್ಸವಕ್ಕೆ ಒಬಾಮ ಅತಿಥಿ

Pinterest LinkedIn Tumblr

Modi-Obama_2216306g

ಹೊಸದಿಲ್ಲಿ, ನ.21: ಈ ಬಾರಿಯ ಗಣರಾಜ್ಯೋತ್ಸವದಲ್ಲಿ (26, ಜನವರಿ, 2015) ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧವಾಗಿ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಆಹ್ವಾನವನ್ನು ಒಬಾಮ ಒಪ್ಪಿಕೊಂಡಿದ್ದಾರೆ.
ಮೋದಿ, ಶುಕ್ರವಾರ ಸಂಜೆ ಟ್ವಿಟ್ಟರ್‌ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ‘‘ಈ ಸಲದ ಗಣರಾಜ್ಯೋತ್ಸವಕ್ಕೆ ಸ್ನೇಹಿತರೊಬ್ಬರು ಆಗಮಿಸಲಿದ್ದಾರೆ ಎಂದು ನಾವು ಆಶಿಸುತ್ತೇವೆ. ಬರಾಕ್ ಒಬಾಮ ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಲಿರುವ ಅಮೆರಿಕದ ಪ್ರಥಮ ಅಧ್ಯಕ್ಷರೆನಿಸಿಕೊಳ್ಳುವರು’’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಬರಾಕ್ ಒಬಾಮ ಭಾರತದ ಗಣರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವ ಅಮೆರಿಕದ ಮೊತ್ತಮೊದಲ ಅಧ್ಯಕ್ಷರಾಗಲಿದ್ದಾರೆ ಎಂದು ಶ್ವೇತಭವನದ ಹೇಳಿಕೆ ತಿಳಿಸಿದೆ.
ಅಧ್ಯಕ್ಷ ಒಬಾಮ ಪ್ರಧಾನಿ ಮತ್ತು ಇತರ ಭಾರತೀಯ ಅಧಿಕಾರಿಗಳನ್ನು ಭೇಟಿಯಾಗಲಿದ್ದು, ಅಮೆರಿಕ-ಭಾರತ ವ್ಯೆಹಾತ್ಮಕ ಪಾಲುಗಾರಿಕೆಯ ವಿಸ್ತರಣೆ ಮತ್ತು ಅದನ್ನು ಬಲಗೊಳಿಸುವ ದಿಸೆಯಲ್ಲಿ ಮಾತುಕತೆ ನಡೆಸುವರು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಅಧ್ಯಕ್ಷ ಬರಾಕ್ ಒಬಾಮ ಅವರು ಮೋದಿ ಆಹ್ವಾನವನ್ನು ಸ್ವೀಕರಿಸಿ ಭಾರತ ಭೇಟಿಯನ್ನು ಖಚಿತಪಡಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರಾದ ಸೈಯದ್ ಅಕ್ಬರುದ್ದೀನ್ ತಿಳಿಸಿದ್ದಾರೆ.

Write A Comment