ರಾಷ್ಟ್ರೀಯ

ವಾಜಪೇಯಿ-ಮಾಳವೀಯಾಗೆ ‘ಭಾರತ ರತ್ನ’ ಗೌರವ

Pinterest LinkedIn Tumblr

vaji

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ದಿ. ಪಂಡಿತ್ ಮದನ್ ಮೋಹನ್ ಮಾಳವೀಯಾ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನ ಘೋಷಿಸಲಾಗಿದೆ.

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಅಟಲ್ ಬಿಹಾರಿ ವಾಜಪೇಯಿ ಮತ್ತು ಮದನ್ ಮೋಹನ್ ಮಾಳವೀಯ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ಟ್ವಿಟರ್‌ನಲ್ಲಿ ಅಧಿಕೃತವಾಗಿ ಘೋಷಿಸಿದ್ದಾರೆ.

ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ನಂತರ ಅಟಲ್ ಬಿಹಾರಿ ವಾಜಪೇಯಿ ಹಾಗೂ ಮದನ್ ಮೋಹನ್ ಮಾಳವೀಯ ಅವರ ಹೆಸರನ್ನು ರಾಷ್ಟ್ರಪತಿಗಳಿಗೆ ಸೂಚಿಸಿದ್ದರು. ಇದಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.

ಡಿ. 25ರಂದು ವಾಜಪೇಯಿ ಅವರ ಜನ್ಮದಿನ. ಈ ದಿನವನ್ನು ಉತ್ತಮ ಆಡಳಿತದ ದಿನವನ್ನಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನಿರ್ಧರಿಸಿತ್ತು. ಇದಕ್ಕೆ ಪೂರಕವಾಗಿ ಭಾರತ ರತ್ನ ಘೋಷಿಸುವ ಮೂಲಕ ಅಟಲ್ ಜನ್ಮದಿನವನ್ನು ಮೋದಿ ಅವರು ಇನ್ನಷ್ಟು ಅರ್ಥಪೂರ್ಣವಾಗಿಸಿದ್ದಾರೆ.

Write A Comment