ರಾಷ್ಟ್ರೀಯ

ಪೊಲೀಸರಿಂದಲೇ ಅಪ್ರಾಪ್ತೆ ಮೇಲೆ ಗ್ಯಾಂಗ್‌ರೇಪ್

Pinterest LinkedIn Tumblr

rape

ಬದನೌ: ಪೊಲೀಸ್ ಠಾಣೆಯೊಂದರಲ್ಲಿ ಇಬ್ಬರು ಪೊಲೀಸ್ ಪೇದೆಗಳು 14 ವರ್ಷದ ಅಪ್ರಾಪ್ತ ಬಾಲೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಸಂಬಂಧ ಆ ಇಬ್ಬರು ಪೊಲೀಸರನ್ನು ಶುಕ್ರವಾರ ಅಮಾನತು ಮಾಡಲಾಗಿದೆ.

ಪೊಲೀಸ್ ಪೇದೆಗಳಾದ ವೀರ್ ಪಾಲ್ ಸಿಂಗ್ ಯಾದವ್ ಮತ್ತು ಅವಿನಾಶ್ ಯಾದವ್ ಡಿಸೆಂಬರ್ 31ರಂದು ಆಪ್ರಾಪ್ತ ಬಾಲೆಯನ್ನು ಮನೆಯಿಂದ ಅಪಹರಿ, ಪೊಲೀಸ್ ಠಾಣೆಗೆ ಕರೆತಂದು ಅತ್ಯಾಚಾರ ಎಸಗಿದ್ದಾರೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.

ಬಾಲಕಿಯನ್ನು ಮುಸಜಾಗ್ ಪೊಲೀಸ್ ಠಾಣೆಗೆ ಕರೆದೊಯ್ದು ಅತ್ಯಾಚಾರ ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲಲನ್ ಸಿಂಗ್ ಅವರು ಹೇಳಿದ್ದಾರೆ.

ಸದ್ಯ ಆರೋಪಿಗಳಿಬ್ಬರು ನಾಪತ್ತೆಯಾಗಿದ್ದು, ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಈಗ ಆ ಇಬ್ಬರು ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಆರೋಪಿಗಳ ಪತ್ತೆಗೆ ಪೊಲೀಸ್ ತಂಡ ರಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪೊಲೀಸ್ ಠಾಣೆಯ ಕೊಣೆಯೊಂದರಲ್ಲಿ ನನ್ನನ್ನು ಕೂಡಿಹಾಕಿದ ಪೊಲೀಸರು, ನನ್ನ ಮೇಲೆ ಹಲ್ಲೆ ನಡೆಸಿ, ಬಳಿಕ ಅತ್ಯಾಚಾರ ಎಸಗಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾಳೆ.

Write A Comment