ರಾಷ್ಟ್ರೀಯ

ಬಿಜೆಪಿ ಸೇರಿದ ಕಿರಣ್‌ ಬೇಡಿ: ದೆಹಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧೆ

Pinterest LinkedIn Tumblr

bedi

ನವದೆಹಲಿ: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ನೇತೃತ್ವದ ‘ಭ್ರಷ್ಟಾಚಾರ ವಿರೋಧಿ ಭಾರತ’ ತಂಡದ ಪ್ರಮುಖ ಸದಸ್ಯೆ­ಯಾಗಿದ್ದ ಮಾಜಿ ಐಪಿಎಸ್‌ ಅಧಿಕಾರಿ ಕಿರಣ್‌ ಬೇಡಿ ಗುರುವಾರ ಬಿಜೆಪಿ ಸೇರಿದರು.

ಪಕ್ಷದ ಕಚೇರಿಯಲ್ಲಿ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ, ಕೇಂದ್ರ ಸಚಿವರಾದ ಅರುಣ್ ಜೇಟ್ಲಿ ಹಾಗೂ ಹರ್ಷ­ವರ್ಧನ್‌ ವಿಧ್ಯುಕ್ತವಾಗಿ ಬರಮಾಡಿಕೊಂಡರು.

ಫೆಬ್ರವರಿ 7ರಂದು ನಡೆಯಲಿರುವ ದೆಹಲಿ ವಿಧಾನಸಭಾ  ಚುನಾವಣೆಯಲ್ಲಿ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿ­ಸಲಿದ್ದಾರೆ. ದೆಹಲಿಯಲ್ಲಿ  ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಕ್ಷವನ್ನು ಹಣಿಯುವ ತಂತ್ರದ ಭಾಗವಾಗಿ ಬಿಜೆಪಿ ಅವರನ್ನು ಪಕ್ಷಕ್ಕೆ ಕರೆತಂದಿದೆ ಎನ್ನಲಾಗಿದೆ.

ಪ್ರತಿಷ್ಠಿತ ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಕೇಜ್ರಿವಾಲ್‌ ವಿರುದ್ಧ ಬಿಜೆಪಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಒಂದು ವೇಳೆ ದೆಹಲಿ­ಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬೇಡಿ ಕೂಡ ಮುಖ್ಯಮಂತ್ರಿ ಹುದ್ದೆಯ ಪೈಪೋಟಿಯಲ್ಲಿರುತ್ತಾರೆ ಎಂಬ ಊಹಾಪೋಹವೂ ಕೇಳಿಬಂದಿದೆ.

ಆದರೆ, ಬೇಡಿ ಅವರನ್ನು ಪಕ್ಷವು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅಮಿತ್‌ ಷಾ, ಪಕ್ಷದ ಸಂಸದೀಯ ಮಂಡಳಿ ಈ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು.

‘ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಗುಣಗಳಿಂದ ಆಕರ್ಷಿತಳಾಗಿ ಬಿಜೆಪಿ ಸೇರಿದ್ದೇನೆ’ ಎಂದು ಕಿರಣ್ ಬೇಡಿ ಹೇಳಿದರು.

Write A Comment