ರಾಷ್ಟ್ರೀಯ

ಉತ್ತರ ಪ್ರದೇಶದ ಮುಘಲ್‌ಸಾರಿ ನಗರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: 13 ಸಾವು

Pinterest LinkedIn Tumblr

BULDINGWEB

ಲಖನೌ : ಉತ್ತರ ಪ್ರದೇಶದ ಮುಘಲ್‌ಸಾರಿ ನಗರದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಮಾಲೀಕ ಸೇರಿ 13 ಮಂದಿ ಮೃತಪಟ್ಟ ದಾರುಣ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಮೃತಪಟ್ಟವರಲ್ಲಿ 8 ವರ್ಷದೊಳಗಿನ ಇಬ್ಬರು ಮಕ್ಕಳು ಸೇರಿದ್ದಾರೆ.

ಘಟನೆ ನಡೆಯುವಾಗ ಕಟ್ಟಡ ಕೆಳಗಿನ ಮಹಡಿಯಲ್ಲಿ 15ಕ್ಕೂ ಹೆಚ್ಚು ಕಾರ್ಮಿಕರು ಮಲಗಿ ನಿದ್ರಿಸುತ್ತಿದ್ದರು. ಇವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು ಎಂದು ಪೊಲೀಸ್‌ ಮೂಲಗಳು ಹೇಳಿವೆ.

ತೀವ್ರವಾಗಿ ಗಾಯಗೊಂಡು ಅವಶೇಷಗಳಡಿ ಸಿಲುಕಿದ್ದ ಇಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚಂದೊಳಿ ಮುನಿರಾಜ್‌ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆದುಕೊಳ್ಳಲಾಗಿತ್ತೇ ಇಲ್ಲವೇ ಎನ್ನುವುದನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಮೃತರ ಕುಟುಂಬಗಳಿಗೆ ತಲಾ ರೂ 30 ಸಾವಿರ ಪರಿಹಾರ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್‌. ಸಿಂಗ್‌ ತಿಳಿಸಿದ್ದಾರೆ.

Write A Comment