ಅಂತರಾಷ್ಟ್ರೀಯ

ಮೋದಿ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿರುವುದಕ್ಕೆ ಚೀನಾ ತಗಾದೆ

Pinterest LinkedIn Tumblr

Modi-and-Chinaaa

ಬೆಂಗಳೂರು, ಫೆ.21: ಭಾರತದ ವಿರುದ್ಧ ಸದಾ ಕತ್ತಿ ಮಸೆಯುವ ಚೀನಾ ದೇಶ ಇದೀಗ ಪ್ರಧಾನಮಂತ್ರಿ ನರೇಂದ್ರಮೋದಿ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿರುವುದಕ್ಕೆ ತಗಾದೆ ತೆಗೆದಿದೆ. ನಿನ್ನೆ ಪ್ರಧಾನಿ ನರೇಂದ್ರಮೋದಿ ಅರುಣಾಚಲ ಪ್ರದೇಶಕ್ಕೆ ಅಧಿಕೃತ ಕಾರ್ಯಕ್ರಮ ನಿಮಿತ್ತ ಭೇಟಿ ನೀಡಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಚೀನಾ ಎರಡು ರಾಷ್ಟ್ರಗಳ ನಡುವೆ ಗಡಿ ವಿವಾದ ಇರುವಾಗ ಈ ರೀತಿ ಭೇಟಿ ನೀಡುವುದನ್ನು ನಮ್ಮ ರಾಷ್ಟ್ರ ಒಪ್ಪುವುದಿಲ್ಲ ಎಂದು ಆಕ್ಷೇಪಿಸಿದೆ.

ಅರುಣಾಚಲ ಪ್ರದೇಶಕ್ಕೆ ಮೋದಿ ಭೇಟಿ ನೀಡಿರುವುದನ್ನು ನಾವು ಅಧಿಕೃತವಾಗಿಯೇ ವಿರೋಧ ವ್ಯಕ್ತಪಡಿಸುತ್ತೇವೆ. ಚೀನಾ ದೇಶ ಹೇಗೆ ಟಿಬೆಟ್‌ಗೆ ಹೋಗಲು ಹಿಂದೇಟು ಹಾಕುತ್ತದೆಯೋ ಅದೇ ರೀತಿ ಅರುಣಾಚಲ ಪ್ರದೇಶಕ್ಕೂ ಇದು ಅನ್ವಯವಾಗುತ್ತದೆ ಎಂಬುದನ್ನು ಮೋದಿ ಅರ್ಥಮಾಡಿಕೊಳ್ಳಬೇಕೆಂದು ವಿದೇಶಾಂಗ ವ್ಯವಹಾರಗಳ ವೆಬ್‌ಸೈಟ್‌ನಲ್ಲಿ ಇದು ಪ್ರಕಟಗೊಂಡಿದೆ.

ಚೀನಾ ದೇಶವು ನರೇಂದ್ರಮೋದಿ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿರುವುದನ್ನು ಒಪ್ಪಿಕೊಳ್ಳುವುದಿಲ್ಲ. ನಾವು ಇದನ್ನು ಅಧಿಕೃತವಾಗಿಯೇ ವಿರೋಧಿಸುತ್ತಿದ್ದೇವೆ. 1962ರಿಂದಲೂ ಎರಡೂ ರಾಷ್ಟ್ರಗಳ ನಡುವೆ ಗಡಿ ವಿವಾದ ಇದೆ ಎಂಬುದನ್ನು ನೆರೆರಾಷ್ಟ್ರ ತಿಳಿಯಲಿ ಎಂಬುದು ವರದಿಯಲ್ಲಿ ಉಲ್ಲೇಖವಾಗಿದೆ. ಅರುಣಾಚಲ ಪ್ರದೇಶದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ಕೋಟ್ಯಂತರ ರೂ. ಆರ್ಥಿಕ ನೆರವು ನೀಡುವುದಾಗಿ ಮೋದಿ ಹೇಳಿದ್ದಾರೆ. ಇದು ಒಪ್ಪಂದದ ಉಲ್ಲಂಘನೆ ಎಂದು ಆಕ್ಷೇಪಿಸಿದೆ.

Write A Comment