ಮೀರತ್: ಇಬ್ಬರು ಯುವಕರ ಖಾಸಗಿ ಭಾಗಗಳನ್ನು ಕತ್ತರಿಸಿ ಎಸೆದ ಘಟನೆ ಜಿಲ್ಲೆಯಲ್ಲಿ ವರದಿಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಜಾನಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಪಂಚಾಲಿ ಪೌಲ್ಟ್ರಿ ಫಾರ್ಮ್ ಬಳಿ ಇಬ್ಬರು ಯುವಕರು ಗಂಭೀರ ಸ್ಥಿತಿಯಲ್ಲಿರುವುದನ್ನು ಕಂಡ ಗ್ರಾಮಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಗಂಭೀರವಾಗಿ ಗಾಯಗೊಂಡ ಯುವಕರನ್ನು ಸಾಬೀರ್(35) ಮತ್ತು ಪ್ರದೀಪ್ ಎಂದು ಗುರುತಿಸಲಾಗಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆಯಿಂದ ಸ್ವಲ್ಪ ಚೇತರಿಸಿಕೊಂಡ ನಂತರ ಮಾತನಾಡಿದ ಗಾಯಾಳು ಸಾಬೀರ್, ನೀಲಮ್ ಎನ್ನುವ ಮಹಿಳೆ ಕುಡಿಯಲು ಟೀ ಕೊಟ್ಟಿದ್ದಳು. ಟೀ ಕುಡಿದ ಕೂಡಲೇ ಪ್ರಜ್ಞೆ ಕಳೆದುಕೊಂಡಿದ್ದೇನೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಆರೋಪಿ ಮಹಿಳೆ ನೀಲಂ ತನ್ನ ಸಹಚರರೊಂದಿಗೆ ಸೇರಿ ಇಂತಹ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆರೋಪಿ
ಮಹಿಳೆ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.