ರಾಷ್ಟ್ರೀಯ

ಮಳೆ ಹಾನಿ: ವಿಪತ್ತು ಘೋಷಣೆ, ಸಾವಿರ ಕೋಟಿಗೆ ಆಗ್ರಹ

Pinterest LinkedIn Tumblr

naj80fjg

ಲಖನೌ: ಉತ್ತರ ಪ್ರದೇಶದ 55 ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರವಾಗಿ ಸುರಿದ ಅಕಾಲಿಕ ಮಳೆಯಿಂದ ವ್ಯಾಪಕ ಹಾನಿಯಾಗಿದ್ದು, ಇದನ್ನು ವಿಪತ್ತು ಎಂದು ಘೋಷಿಸಿ ಒಂದು ಸಾವಿರ ಕೋಟಿ ರೂಪಾಯಿ ವಿಪತ್ತು ಪರಿಹಾರ ನೀಡಬೇಕು ಎಂದು ಕೋರಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದಾರೆ.

ಅಖಿಲೇಶ್ ಯಾದವ್ ಅವರು, ಸೋಮವಾರ ಮಳೆ ಹಾನಿ ಕುರಿತು ಪರಿಸ್ಥಿತಿಯ ಪರಾಮರ್ಶೆ ನಡೆಸಿದ್ದು, ಮಳೆಯಿಂದ ಅಸಹಜ ಸಾವಿಗೀಡಾದ ರೈತರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ ಐದು ಲಕ್ಷ ರೂಪಾಯಿ ನೀಡಲಾಗುವುದು ಎಂದು ಹೇಳಿರುವುದಾಗಿ ವಕ್ತಾರರು ತಿಳಿಸಿದ್ದಾರೆ.

ಮಳೆ ಹಾನಿಯನ್ನು ಅಂದಾಜು ಮಾಡಲಾಗಿದ್ದು, 44 ಜಿಲ್ಲೆಗಳಲ್ಲಿ ಶೇ 50ರಷ್ಟು ಬೆಳೆ ಹಾನಿಗೊಳಗಾಗಿದೆ. 11 ಜಿಲ್ಲೆಗಳಲ್ಲಿ ಶೇ 33ರಷ್ಟು ಬೆಳೆ ಹಾನಿಯಾಗಿದೆ ಎಂದು ಅವರು ಪ್ರಧಾನಿಗೆ ಬರೆದಿರುವ ಪತ್ರದಲ್ಲಿ ವಿವರಿಸಿದ್ದಾರೆ.

ವಿಭಾಗೀಯ ಹಾಗೂ ಜಿಲ್ಲಾ ಅಧಿಕಾರಿಗಳು ರಜೆ ತೆಗೆದುಕೊಳ್ಳದೆ ಪರಿಹಾರ ಕಾರ್ಯಗಳನ್ನು ಅತ್ಯಂತ ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದು ಅವರು ಸೂಚನೆ ನೀಡಿದ್ದಾರೆ.

Write A Comment