ನವದೆಹಲಿ, ಮೇ. 1: ಬೆಂಗಳೂರು ಕೇಂದ್ರ ರೈಲ್ವೆ ನಿಲ್ದಾಣ ಇನ್ನು ಮುಂದೆ ‘ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ’ ಎಂದು ಬದಲಾಗಲಿದ್ದು ಅನೇಕ ದಿನಗಳ ಕನ್ನಡದ ಹೋರಾಟಕ್ಕೆ ಆರಂಭಿಕ ಜಯ ಸಿಕ್ಕಂತಾಗಿದೆ. ರಾಯಣ್ಣ ಅವರ ಹೆಸರಿಡಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿಸಿದೆ.
ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ರೈಲ್ವೆ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರು ನಾಮಕರಣ ಮಾಡಲು ನಿರ್ಣಯ ಕೈಗೊಳ್ಳಲಾಗಿತ್ತು. ಸಿಟಿ ರೈಲ್ವೆ ನಿಲ್ದಾಣ ಮುಂಭಾಗ ಸಂಗೊಳ್ಳಿರಾಯಣ್ಣ ನವರ ಕಂಚಿನ ಪ್ರತಿಮೆ ಸಹ ಅನಾವರಣ ಮಾಡಲಾಗಿತ್ತು. ಆಗ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಕೇಂದ್ರಕ್ಕೆ ಸರ್ಕಾರಕ್ಕೆ ಪತ್ರ ಸಹ ಬರೆದು ಆಗ್ರಹ ಮಾಡಿದ್ದರು.
“ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಹೆಸರು ನಾಮಕರಣ ಮಾಡಬೇಕು ಎಂಬ ದಶಕಗಳ ಬೇಡಿಕೆ ಈಗ ಈಡೇರಿದಂತಾಗಿದೆ. ರಾಜ್ಯ ಸಚಿವ ಸಂಪುಟ ಸಹ ಸಿಟಿ ರೈಲ್ವೆ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರು ನಾಮಕರಣ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧಾರ ತಯೆಗೆದಿಕೊಂಡು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುತ್ತು. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ, ಹಳೆಯ ಪ್ರಸ್ತಾವಕ್ಕೆ ತನ್ನ ಅನುಮೋದನೆ ನೀಡಿದ್ದು ರಾಜ್ಯದ ಜನರ ಕನಸು ನನಸಾಗುವ ಕಾಲ ಕೂಡಿಬಂದಿದೆ.
ಇದರ ಜತೆಗೆ ಶಿವಮೊಗ್ಗ, ಕಲಬುರಗಿ, ವಿಜಯಪುರ ಸೇರಿದಂತೆ ರಾಜ್ಯದ ಅನೇಕ ನಗರಗಳ ಹೆಸರನ್ನು ಕಳೆದ ವರ್ಷ ಬದಲಾವಣೆ ಮಾಡಲಾಗಿತ್ತು. ಆಂಗ್ಲ ಭಾಷೆಯಲ್ಲಿಯೂ ಹೆಸರುಗಳನ್ನು ಸರಿಯಾಗಿ ಬರೆಯುವಂತೆ ಅಧಿಕೃತ ಸೂಚನೆ ಹೊರಬಂದಿತ್ತು.
ಸಂಗೋಳ್ಳಿ ರಾಯಣ್ಣ ಯಾರು?
ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯದ ಕಹಳೆಯನ್ನು ಮೊದಲು ಮೂಡಿಸಿದವರಲ್ಲಿ ಕನ್ನಡಿಗ ಸಂಗೊಳ್ಳಿ ರಾಯಣ್ಣ ಎತ್ತರದಲ್ಲಿ ನಿಲ್ಲುತ್ತಾರೆ. ಕಿತ್ತೂರು ರಾಣಿ ಚೆನ್ನಮ್ಮಳ ಬಲಗೈ ಬಂಟ ಎಂದು ಗುರುತಿಸಿಕೊಂಡಿದ್ದ ರಾಯಣ್ಣ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಜನಸಿದವರು. ಗೆರಿಲ್ಲಾ ಯುದ್ಧ ತಂತ್ರದಲ್ಲಿ ನಿಷ್ಣಾತನಾಗಿದ್ದ ರಾಯಣ್ಣ 1831 ರಲ್ಲಿ ಬ್ರಿಟಿಷರ ಗಲ್ಲಿಗೆ ಕುತ್ತಿಗೆ ಒಡ್ಡಬೇಕಾಯಿತು. ಸಂಗೋಳ್ಳಿ ರಾಯಣ್ಣ ಹೆಸರಿನಲ್ಲಿ ಕನ್ನಡದಲ್ಲಿ ಸಿನಿಮಾವೊಂದು ತಯಾರಾಗಿದ್ದು ಯಶಸ್ಸು ಕಂಡಿದ್ದನ್ನು ನೋಡಿದ್ದೇವೆ.
-ಕೃಪೆ: ದಟ್ಸ್ ಕನ್ನಡ