ರಾಷ್ಟ್ರೀಯ

ಮಾಜಿ ಪ್ರಧಾನಿ ವಾಜಪೇಯಿಗೆ ‘ಭಾರತ ರತ್ನ’ ನೀಡಿದ್ದು ಸರಿಯಲ್ಲ: ಓವೈಸಿ

Pinterest LinkedIn Tumblr

vajapayi2

ಹೈದರಾಬಾದ್: ಮಾಜಿ ಪ್ರಧಾನಿ, ಬಿಜೆಪಿಯ ಹಿರಿಯ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ ನೀಡಿದ್ದು ಸರಿಯಲ್ಲ ಎಂದು ಅಖೀಲ ಭಾರತ ಮಜ್ಲಿಸ್ ಎ ಇತ್ತೆಹಾದುಲ್ ಮುಸ್ಲಿಮೀನ್(ಎಐಎಂಐಎಂ)ನ ಸಂಸದ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಓವೈಸಿ, ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಭಾಗಿಯಾಗಿರುವ ವಾಜಪೇಯಿ ಅವರಿಗೆ ಭಾರತ ರತ್ನ ಹಾಗೂ ಮಾಜಿ ಉಪ ಪ್ರಧಾನಿ ಎಲ್. ಆಡ್ವಾಣಿ ಅವರಿಗೆ ಪದ್ಮವಿಭೂಷಣ ನೀಡಿದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ.

ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಈ ಇಬ್ಬರು ನಾಯಕರಿಗೆ ದೇಶದ ಅತ್ಯುನ್ನತ ಪ್ರಶಸ್ತಿಗಳನ್ನು ನೀಡಿದ್ದು ಸರಿಯಲ್ಲ ಎಂದು ಹೇಳುವ ಮೂಲಕ ಓವೈಸಿ ಹೊಸ ವಿವಾದ ಹುಟ್ಟುಹಾಕಿದ್ದಾರೆ.

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಕಳೆದ ಮಾರ್ಚ್ 27ರಂದು ವಾಜಪೇಯಿ ಅವರ ನಿವಾಸಕ್ಕೆ ತೆರಳಿ, ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದರು.
-ಕನ್ನಡ ಪ್ರಭ

Write A Comment