ಮಿಡ್ನಾಪುರ: ಅಕ್ರಮ ಪಟಾಕಿ ಉತ್ಪಾದನಾ ಕಾರ್ಖಾನೆ ಸ್ಫೋಟಿಸಿ ಸುಮಾರು 10 ಮಂದಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಪಶ್ಚಿಮ ಬಂಗಾಳದ ಮಿಡ್ನಾಪುರ ಜಿಲ್ಲೆಯ ಬ್ರಹಾಮನ್ ಗ್ರಾಮದಲ್ಲಿ ನಡೆದಿದೆ.
ಇನ್ನು ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆಯಿದೆ ಎಂದು ಎಸ್ಪಿ ಭಾರತಿ ಘೋಷ್ ಹೇಳಿದ್ದಾರೆ.
ಘಟನೆ ನಡೆದ ನಂತರ ಪರಾರಿಯಾಗಿದ್ದ ಕಾರ್ಖಾನೆ ಮಾಲೀಕ ರಂಜನ್ ಮೈತಿ ಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ತೃಣಮೂಲ ಕಾಂಗ್ರೆಸ್ ಬೆಂಬಲಿಗ ಎನ್ನಲಾಗಿದೆ.
ಪಟಾಕಿ ಕಾರ್ಖಾನೆ ಹೆಸರಲ್ಲಿ ಬಾಂಬ್ ತಯಾರಿಸುತ್ತಿದ್ದರು ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕಾರ್ಖಾನೆಯಲ್ಲಿ ಸ್ಫೋಟಗೊಂಡಾಗ ತೀವ್ರ ಶಬ್ದ ಕೇಳಿಸಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆ ಪಕ್ಕದ ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.