ಕೋಲ್ಕತ್ತ, ಮೇ 8: ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯ ರಂಗಟ್ ಬಳಿ 72 ವರ್ಷದ ಕ್ರೈಸ್ತ ಸನ್ಯಾಸಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಮಿಲನ್ಸರ್ಕಾರ್ನನ್ನು ಪೊಲೀಸರು ಇಂದು ಬಂಧಿಸಿದ್ದಾರೆ.
ಶೀಲ್ಡಾದಲ್ಲಿ ತಲೆ ಮರೆಸಿಕೊಂಡಿದ್ದ ಮಿಲನ್ಸರ್ಕಾರ್ನನ್ನು ಖಚಿತ ಮಾಹಿತಿ ಮೇರೆಗೆ ಪೊಲೀಸರು ಮಿಂಚಿನ ದಾಳಿ ನಡೆಸಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಮಾ.14ರಂದು ನಡೆದಿದ್ದ ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ನಾಲ್ವರು ಬಾಂಗ್ಲಾದೇಶ ಪ್ರಜೆಗಳನ್ನು ಬಂಧಿಸಿದ್ದರು.
ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮಿಲನ್ ಸರ್ಕಾರ್ ಅಂದಿನಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ. ಪಶ್ಚಿಮಬಂಗಾಳದಾದ್ಯಂತ ಭಾರಿ ಕೋಲಾಹಲವನ್ನೇ ಸೃಷ್ಟಿಸಿದ್ದ ಈ ಪ್ರಕರಣ ಆಡಳಿತಾರೂಢ ಟಿಎಂಸಿ ಸರ್ಕರಕ್ಕೆ ಭಾರಿ ಮುಖಭಂಗ ಉಂಟು ಮಾಡಿತ್ತು.