ರಾಷ್ಟ್ರೀಯ

ಯುವತಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭಗ್ನ ಪ್ರೇಮಿ

Pinterest LinkedIn Tumblr

9567jj_24

ಹೈದರಾಬಾದ್: ಎಂಬಿಎ ವ್ಯಾಸಂಗ ಮಾಡುತ್ತಿದ್ದ ಯುವಕನೊಬ್ಬ ತನ್ನದೇ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವತಿಯನ್ನು ವಿವಾಹವಾಗುವಂತೆ ಪೀಡಿಸುತ್ತಿದ್ದು, ಆಕೆ ನಿರಾಕರಿಸಿದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದು ಆಕೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆತ್ನಿಸಿರುವ ಘಟನೆ ನಡೆದಿದೆ.

ಸೈದಾಬಾದಿನಲ್ಲಿ ಈ ಇಬ್ಬರೂ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರೆಂದು ಹೇಳಲಾಗಿದ್ದು, ಕಳೆದ ಒಂದು ವರ್ಷದಿಂದ ಈ ಯುವಕ ತನ್ನನ್ನು ಪ್ರೀತಿಸುವಂತೆ ಯುವತಿಯ ಹಿಂದೆ ಬಿದ್ದಿದ್ದನೆಂದು ಹೇಳಲಾಗಿದೆ. ಪದವಿ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಆಕೆಯನ್ನು ಮಾತುಕತೆಗೆಂದು ಕರೆದಿದ್ದ ಯುವಕ ಈ ವೇಳೆ ವಿವಾಹ ಪ್ರಸ್ತಾಪವನ್ನು ಮುಂದಿಟ್ಟನೆಂದು ತಿಳಿದುಬಂದಿದೆ.

ಇದಕ್ಕೆ ಯುವತಿ ಸ್ಪಷ್ಟವಾಗಿ ನಿರಾಕರಿಸುತ್ತಿದ್ದಂತೆಯೇ ಮೊದಲೇ ಸಿದ್ದವಾಗಿ ಬಂದಿದ್ದ ಯುವಕ ಆಕೆಯ ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಬಳಿಕ ತಾನೂ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇಬ್ಬರನ್ನೂ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ಸುಟ್ಟ ಗಾಯಗಳಿಂದ ನರಳುತ್ತಿರುವ ಯುವತಿ ಜೀವನ್ಮರಣದ ಪರಿಸ್ಥಿತಿಯಲ್ಲಿದ್ದಾಳೆಂದು ವೈದ್ಯರು ತಿಳಿಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡಿರುವ ಸೈದಾಬಾದ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Write A Comment