ರಾಷ್ಟ್ರೀಯ

10 ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಫೇಸ್ ಬುಕ್ ಸ್ನೇಹಿತ

Pinterest LinkedIn Tumblr

face

ಉತ್ತರ ಪ್ರದೇಶ: 10 ನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಸಾಮಾಜಿಕ ಜಾಲ ತಾಣ ಫೇಸ್ ಬುಕ್ ನಲ್ಲಿ ಸ್ನೇಹಿತೆಯನ್ನಾಗಿಸಿಕೊಂಡಿದ್ದ ಬಾಲಕನೊಬ್ಬ ಆಕೆಯ ಮೇಲೆ ಅತ್ಯಾಚಾರವೆಸಗಿ ಅದನ್ನು ಮೊಬೈಲಿನಲ್ಲಿ ರೆಕಾರ್ಡ್ ಮಾಡಿಕೊಂಡು ಬ್ಲಾಕ್ ಮೇಲ್ ಮಾಡಿದ ಘಟನೆ ಬೆಳಕಿಗೆ ಬಂದಿದೆ.

ಉತ್ತರ ಪ್ರದೇಶದ ಗಾಜಿಯಾಬಾದಿನಲ್ಲಿ ಈ ಘಟನೆ ನಡೆದಿದ್ದು, ಪೊಲೀಸನೊಬ್ಬನ ಪುತ್ರನಾಗಿರುವ ಈ ಬಾಲಕ ಗೋವಿಂದಪುರಂ ನಿವಾಸಿಯಾಗಿದ್ದ 10 ನೇ ತರಗತಿ ವಿದ್ಯಾರ್ಥಿನಿಯನ್ನು ಫೇಸ್ ಬುಕ್ ಮೂಲಕ ಪರಿಚಯ ಮಾಡಿಕೊಂಡಿದ್ದ. ಬಳಿಕ ಇವರಿಬ್ಬರು ಆಗಾಗ ಭೇಟಿಯಾಗುತ್ತಿದ್ದು ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿದ್ಯಾರ್ಥಿನಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿದ್ದ ಬಾಲಕ ಮತ್ತು ಬರಿಸುವ ಔಷಧ ನೀಡಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ.

ಅತ್ಯಾಚಾರದ ದೃಶ್ಯಗಳನ್ನು ತನ್ನ ಮೊಬೈಲಿನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದ ಬಾಲಕ ಈ ಎಂಎಂಎಸ್ ನ್ನು ವಾಟ್ಸಾಪ್ ನಲ್ಲಿ ಹಾಕುವುದಾಗಿ ಬೆದರಿಸಿ ನಂತರವೂ ಹಲವು ಬಾರಿ ಅತ್ಯಾಚಾರವೆಸಗಿದ್ದ. ಈತನ ನಿರಂತರ ಅತ್ಯಾಚಾರದಿಂದ ಮಾನಸಿಕವಾಗಿ ಜರ್ಜರಿತಳಾಗಿದ್ದ ಬಾಲಕಿ ಇತ್ತೀಚೆಗೆ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದು, ಬಾಲಕನ ವಿರುದ್ದ ಈಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿರುವ ಪೊಲೀಸರು ನಾಪತ್ತೆಯಾಗಿರುವ ಬಾಲಕನ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

Write A Comment