ರಾಷ್ಟ್ರೀಯ

ಪ್ರಿಯತಮನ ಸ್ನೇಹಿತರಿಂದಲೇ ಅತ್ಯಾಚಾರಕ್ಕೊಳಗಾದ ವಿವಾಹಿತ ಯುವತಿ

Pinterest LinkedIn Tumblr

7343rape.jpg.image.784.410

ಕೇರಳ: ಕೌಟುಂಬಿಕ ಕಾರಣಗಳಿಂದಾಗಿ ಪತಿಯಿಂದ ದೂರಾಗಿದ್ದ ಯುವತಿಯೊಬ್ಬಳನ್ನು ಪ್ರೀತಿಸುವ ನಾಟಕವಾಡಿದ ಯುವಕನೊಬ್ಬ ತನ್ನ ಸ್ನೇಹಿತರ ಜೊತೆಗೂಡಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ನಡೆದಿದೆ.

ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಮದುವೆಯಾದ ಕೆಲ ದಿನಗಳಲ್ಲೇ ತನ್ನ ಗಂಡನಿಂದ ದೂರವಾಗಿದ್ದ ಯುವತಿ ಯುವಕನೊಬ್ಬನ ಪ್ರೇಮಪಾಶದಲ್ಲಿ ಬಿದ್ದಿದ್ದಳು. ಆಕೆಯೊಂದಿಗೆ ಪ್ರೀತಿಯ ನಾಟಕವಾಡಿದ್ದ ಯುವಕ ದೈಹಿಕವಾಗಿಯೂ ಆಕೆಯನ್ನು ಬಳಸಿಕೊಂಡಿದ್ದನೆನ್ನಲಾಗಿದೆ.

ಯುವತಿ ತನ್ನನ್ನು ವಿವಾಹವಾಗುವಂತೆ ಇತ್ತೀಚೆಗೆ ಆತನ ಮೇಲೆ ಒತ್ತಡ ಹೇರುತ್ತಿದ್ದು, ಇದರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋದ ಯುವಕ ತನ್ನ ನಾಲ್ವರು ಸ್ನೇಹಿತರೊಡಗೂಡಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಳಿಕ ಆಕೆಯನ್ನು ರಸ್ತೆಯ ಮೇಲೆ ಬಿಸಾಡಿ ಹೋಗಿದ್ದಾರೆ. ಇದೀಗ ಯುವತಿ ಪೊಲೀಸರಿಗೆ ದೂರು ನೀಡಿದ ಮೇರೆಗೆ ಆಕೆಯ ಪ್ರಿಯತಮ ಸೇರಿದಂತೆ ಐವರು ಆರೋಪಿಗಳ ಪತ್ತೆ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ.

Write A Comment