ರಾಷ್ಟ್ರೀಯ

ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದ್ರೆ ಹುಷಾರ್: ಕಟಿಯಾರ್

Pinterest LinkedIn Tumblr

Ram-mandir

ನವದೆಹಲಿ: ರಾಮ ಮಂದಿರ ನಿರ್ಮಾಣ ಕುರಿತಂತೆ ಬಿಜೆಪಿ ಹಿರಿಯ ನಾಯಕರು ವ್ಯತಿರಿಕ್ತ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ರಾಮ ಮಂದಿರ ಯಾವುದೇ ಸರ್ಕಾರ ನಿರ್ಲಕ್ಷ್ಯ ವಹಿಸಬಾರದು ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ವಿನಯ್ ಕಟಿಯಾರ್ ಬುಧವಾರ ಹೇಳಿದ್ದಾರೆ.

ಖಾಸಗಿ ಸುದ್ದಿ ಎಜೆನ್ಸಿಯೊಂದರ ಜೊತೆ ಮಾತನಾಡಿದ ಕಟಿಯಾರ್, ಯಾವುದೇ ಸರ್ಕಾರ ರಾಮ ಮಂದಿರ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದ್ದರೆ ರಾಮ ಭಕ್ತರ ಜ್ವಾಲಾಮುಖಿಯಂತಹ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆಯ ಮಾತುಗಳನ್ನಾಡಿದ್ದಾರೆ. ರಾಮ ಮಂದಿರ ನಿರ್ಮಾಣದ ವಿಷಯದ ಕುರಿತಂತೆ ಕೇಂದ್ರ ಸರ್ಕಾರದ ಅಧಿಕಾರಿಗಳು, ಎಲ್ಲಾ ಪಕ್ಷವನ್ನು ಒಗ್ಗೂಡಿಸಿಕೊಂಡು, ಮಾತುಕತೆ ನಡೆಸಿ ತೀರ್ಮಾನ ಕೈಗೊಳ್ಳಬೇಕು ಎಂದು ಕಟಿಯಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮುಖ್ಯ ವಿಷಯವಾದರೂ, ಸದ್ಯ ನಮಗೆ ಅದು ಪ್ರಮುಖ ಆದ್ಯತೆ ಅಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದರು. ಇದರ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸಹ ನಮಗೆ ರಾಮ ಮಂದಿರ ನಿರ್ಮಾಣಕ್ಕಿಂತ ದೇಶದ ಅಭಿವೃದ್ಧಿಗೆ ಮೊದಲ ಪ್ರಾಮುಖ್ಯತೆ ಎಂದು ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕಟಿಯಾರ್ ಈ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

Write A Comment