ರಾಷ್ಟ್ರೀಯ

ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿಯೇ ಅಯೋಧ್ಯೆಯಲ್ಲಿ ರಾಮಮಂದಿರ: ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್

Pinterest LinkedIn Tumblr

Sakshi Maharaj

ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿಯೇ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲಿದ್ದು, ಇನ್ನು ನಾಲ್ಕು ವರ್ಷಗಳಲ್ಲಿ ಈ ಕೆಲಸ ಪೂರ್ಣಗೊಳ್ಳಲಿದೆ ಎಂದು ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ತಿಳಿಸಿದ್ದಾರೆ.

ಉನ್ನಾವ್ (ಉತ್ತರ ಪ್ರದೇಶ): ಕೇಂದ್ರದ ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿಯೇ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲಿದ್ದು, ಇನ್ನು ನಾಲ್ಕು ವರ್ಷಗಳಲ್ಲಿ ಈ ಕೆಲಸ ಪೂರ್ಣಗೊಳ್ಳಲಿದೆ ಎಂದು ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ತಿಳಿಸಿದ್ದಾರೆ.

ರಾಮಮಂದಿರ ನಿರ್ಮಾಣ ವಿಚಾರದಿಂದ ಬಿಜೆಪಿ ಹಿಂದೆ ಸರಿದಿದೆ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಕುರಿತು ಸ್ಪಷ್ಟನೆ ನೀಡಿದ ಅವರು, ಬಿಜೆಪಿ ಅವಧಿಯಲ್ಲಿ ರಾಮಮಂದಿರ ನಿರ್ಮಾಣವಾಗದಿದ್ದಲ್ಲಿ, ಮತ್ತಿನ್ನೇನು ಕಾಂಗ್ರೆಸ್ ಅವಧಿಯಲ್ಲಿ ನಿರ್ಮಾಣವಾಗಲಿದೆಯೇ? ಅಥವಾ ಮುಲಾಯಂ ಸಿಂಗ್ ಯಾದವ್( ಸಮಾಜವಾದಿ ಪಾರ್ಟಿ)? ಇಲ್ಲವೇ ಮಾಯಾವತಿ (ಬಿಎಸ್​ಪಿ) ಅವರಿಂದ ನಿರ್ಮಾಣವಾಗಲಿದೆಯೇ? ಎಂದು ಪ್ರಶ್ನಿಸಿದ್ದಾರೆ.

ನಾವಿನ್ನೂ ಒಂದು ವರ್ಷವನ್ನಷ್ಟೇ ಪೂರ್ಣಗೊಳಿಸಿದ್ದೇವೆ. ಇನ್ನೂ ನಾಲ್ಕು ವರ್ಷ ಬಾಕಿ ಇದ್ದು, ಇಂದಲ್ಲ ನಾಳೆ ಬಿಜೆಪಿ ಅಧಿಕಾರಾವಧಿಯಲ್ಲಿಯೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವುದು ಶತ:ಸಿದ್ಧ ಎಂದು ಅವರು ಘರ್ಜಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ರಾಮಮಂದಿರ ನಿರ್ಮಾಣದ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೇರಿದಂತೆ ಕೆಲವು ಮುಖಂಡರ ಹೇಳಿಕೆಗಳು ವಿವಾದ ಸೃಷ್ಟಿಸಿದ್ದು, ಈ ಸಮಯದಲ್ಲಿ ಸಾಕ್ಷಿ ಮಹಾರಾಜ್ ನೀಡಿರುವ ಹೇಳಿಕೆ ಮಹತ್ವ ಪಡೆದುಕೊಂಡಿದೆ.

Write A Comment