ರಾಷ್ಟ್ರೀಯ

ಬಿಜೆಪಿಯೊಂದಿಗೆ ಯಾವುದೇ ರೀತಿಯ ಸಂಬಂಧವಿಲ್ಲ: ಕಿರಣ್ ಬೇಡಿ

Pinterest LinkedIn Tumblr

kiran

ನವದೆಹಲಿ: ಕಳೆದ ಐದು ತಿಂಗಳ ಹಿಂದೆ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಮಾಜಿ ಸೂಪರ್ ಕಾಪ್ ಕಿರಣ್ ಬೇಡಿ, ಇದೀಗ ನನಗೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಹೇಳಿರುವುದು ಬಿಜೆಪಿ ವಲಯದಲ್ಲಿ ಕೋಲಾಹಲ ಮೂಡಿಸಿದೆ.

ಬಿಜೆಪಿ ಪಕ್ಷದೊಂದಿಗೆ ಹೊಂದಿರುವ ಸಂಬಂಧ ಕುರಿತಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ ನಾನು ರಾಜಕಾರಣದಲ್ಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಚಟುವಟಿಕೆಗಳಲ್ಲೂ ಪಾಲ್ಗೊಳ್ಳುವುದಿಲ್ಲ ಮತ್ತು ರಾಜಕಾರಣದಿಂದ ದೂರವಿರುತ್ತೇನೆ. ಮುಂಬರುವ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವುದಿಲ್ಲ ಎಂದು ಮಾಜಿ ಐಪಿಎಸ್ ಅಧಿಕಾರಿ ಹೇಳಿದ್ದಾರೆ.

ವೃತ್ತಿಪರ ಗುರಿಗಳಿಗಾಗಿ ಜನತೆಗೆ ಸುಳ್ಳು ಆಶ್ವಾಸನೆಗಳನ್ನು ನೀಡಲು ನನಗೆ ಇಷ್ಟವಿಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದೆ. ಆದರೆ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದರು.

ಕಳೆದ 2014ರ ಫೆಬ್ರವರಿ ತಿಂಗಳಲ್ಲಿ ನಡೆದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಿರಣ್ ಬೇಡಿ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಎಸ್.ಕೆ. ಎದುರು ಪರಾಭವಗೊಂಡಿದ್ದರು. ದೆಹಲಿಯ 70 ಕ್ಷೇತ್ರಗಳಲ್ಲಿ ಬಿಜೆಪಿ ಕೇವಲ 3 ಕ್ಷೇತ್ರಗಳಲ್ಲಿ ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.

Write A Comment