ರಾಷ್ಟ್ರೀಯ

ಹೈದ್ರಾಬಾದ್ ವಿಮಾನ ನಿಲ್ದಾಣದಲ್ಲಿ ಕೋಟಿಗೂ ಹೆಚ್ಚು ಮೌಲ್ಯದ ಚಿನ್ನ ವಶ

Pinterest LinkedIn Tumblr

hyderabad-international

ಹೈದ್ರಾಬಾದ್, ಜೂ.15: ಇತ್ತೀಚೆಗೆ ಚಿನ್ನ ಕಳ್ಳಸಾಗಾಟ ಅಬಾಧಿತವಾಗಿ ನಡೆಯುತ್ತಿದ್ದು, ಇಲ್ಲಿನ ಶಂಶಾ ವಿಮಾನ ನಿಲ್ದಾಣದಲ್ಲಿ ಕಷ್ಟಮ್ಸ್ ಅಧಿಕಾರಿಗಳು ಸುಮಾರು ಒಂದು ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಂಗಾರವನ್ನು ವಶಪಡಿಸಿಕೊಂಡಿದ್ದಾರೆ.

ಇಂದು ಬೆಳಗ್ಗೆ ಇಲ್ಲಿಗೆ ಬಂದಿಳಿದ ವಿಮಾನವೊಂದರ ಚೀಲದಲ್ಲಿ ಅಡಗಿಸಿಟ್ಟಿದ್ದ ಕೇಜಿಗಟ್ಟಲೆ ಚಿನ್ನವನ್ನು ಸ್ವಾಧೀನಪಡಿಸಿಕೊಂಡು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಇತ್ತೀಚೆಗೆ ದೇಶದಲ್ಲಿ ಚಿನ್ನದ ವಹಿವಾಟು ಹೆಚ್ಚುತ್ತಿರುವಂತೆಯೇ ಕಳ್ಳ ಸಾಗಾಟವೂ ಅಷ್ಟೇ ಏರುಗತಿಯಲ್ಲಿ ನಡೆದಿದೆ. 2012-13 ಮತ್ತು 2014-15ರ ಅವಧಿಯಲ್ಲಿ ಚಿನ್ನ ಕಳ್ಳ ಸಾಗಣೆ 5 ಪಟ್ಟು ಹೆಚ್ಚಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಅವಧಿಯಲ್ಲಿ 1,120 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಂಗಾರವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

Write A Comment