ರಾಷ್ಟ್ರೀಯ

ನಾಲ್ಕು ವಾರಗಳೊಳಗೆ ಪೂರ್ವ ವೈದ್ಯಕೀಯ ಮರು ಪರೀಕ್ಷೆಗೆ ಸುಪ್ರೀಂ ಆದೇಶ

Pinterest LinkedIn Tumblr

suprim

ನವದೆಹಲಿ, ಜೂ.15- ಕಳೆದ ಮೇನಲ್ಲಿ ನಡೆದಿದ್ದ ಅಖಿಲ ಭಾರತ ವೈದ್ಯಕೀಯ ಪ್ರವೇಶ ಪರೀಕ್ಷೆ (ಎಐಪಿಎಂಟಿ)-2015ನ್ನು ರದ್ದುಪಡಿಸಿರುವ ಸರ್ವೋಚ್ಚ ನ್ಯಾಯಾಲಯ ಮುಂದಿನ ನಾಲ್ಕು ವಾರಗಳೊಳಗಾಗಿ ಮರು ಪರೀಕ್ಷೆ ನಡೆಸುವಂತೆ ಸಿಬಿಎಸ್‌ಇಗೆ ನಿರ್ದೇಶನ ನೀಡಿದೆ.

ಎಐಪಿಎಂಟಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಕೆಲವು ವಿದ್ಯಾರ್ಥಿಗಳು ಇದರ ಲಾಭ ಪಡೆದಿದ್ದರು. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, 22 ಮಂದಿ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆ ಲಾಭ ಪಡೆದುಕೊಂಡಿದ್ದರು.ಈ ಕುರಿತಂತೆ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ ಅಕ್ರಮ ಸಾಬೀತಾದ ಹಿನ್ನೆಲೆಯಲ್ಲಿ ಅಂದಿನ ಆ ಪರೀಕ್ಷೆಯನ್ನು ರದ್ದುಪಡಿಸಿ ಆದೇಶ ಹೊರಡಿಸಿತ್ತು.

ಈ ಅಕ್ರಮದಿಂದಾಗಿ ಕಷ್ಟಪಟ್ಟು  ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಭಾರೀ ನಷ್ಟವಾಗಿದ್ದರಿಂದ ಅವರು ಕೋರ್ಟ್ ಮೊರೆ ಹೋಗಿದ್ದರು. ಹಾಗಾಗಿ ಜೂ.5ರಂದು ಪ್ರಕಟವಾಗಬೇಕಿದ್ದ ಫಲಿತಾಂಶಕ್ಕೆ ಕೋರ್ಟ್ ತಡೆಯೊಡ್ಡಿ ತೀರ್ಪನ್ನು ಜೂ.15ಕ್ಕೆ ಕಾಯ್ದಿರಿಸಿತ್ತು. ಈ ಬಾರಿ ಪೂರ್ವ ವೈದ್ಯಕೀಯ ಪರೀಕ್ಷೆಗೆ 6.3 ಲಕ್ಷ ವಿದ್ಯಾರ್ಥಿಗಳು ಹಾಜರಾಗಿ ಉತ್ತರ ಬರೆದಿದ್ದರು. ಸುಪ್ರೀಂಕೋರ್ಟ್‌ನ ಈ ಆದೇಶದ ಹಿನ್ನೆಲೆಯಲ್ಲಿ ಸಿಬಿಎಸ್‌ಸಿ ಇನ್ನು ನಾಲ್ಕು ವಾರಗಳೊಳಗಾಗಿ ಪೂರ್ವ ವೈದ್ಯಕೀಯ ಪರೀಕ್ಷೆ ನಡೆಸಬೇಕಾಗಿದೆ.

Write A Comment