ರಾಷ್ಟ್ರೀಯ

12 ಗಂಟೆಗಳ ಅವಧಿಯಲ್ಲಿ 55 ಕೆ.ಜಿ. ಚಿನ್ನ ವಶಕ್ಕೆ

Pinterest LinkedIn Tumblr

goಹೈದರಾಬಾದ್: ಹೊರ ದೇಶಗಳಿಂದ ಅಕ್ರಮ ಚಿನ್ನ ತರುತ್ತಿದ್ದವರನ್ನು ಪತ್ತೆ ಹಚ್ಚಿರುವ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಕೇವಲ 12 ಗಂಟೆಗಳ ಅವಧಿಯಲ್ಲಿ 70 ಪ್ರಯಾಣಿಕರಿಂದ 55 ಕೆ.ಜಿ. ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ವಿಶಾಖಪಟ್ಟಣದ ವಿಮಾನ ನಿಲ್ದಾಣದಲ್ಲಿ ಭಾನುವಾರ ಸಂಜೆ ಮಲೇಶಿಯಾದಿಂದ ಬಂದಿಳಿದ ಏರ್ ಏಷ್ಯಾ ವಿಮಾನದಲ್ಲಿದ್ದ ಪ್ರಯಾಣಿಕರು, ಸಿಂಗಪೂರ್ ನಿಂದ ಬಂದಿದ್ದ ಸಿಲ್ಕ್ ಏರ್ವೇಸ್ ಹಾಗೂ ದುಬೈನಿಂದ ಬಂದ ಏರ್ ಇಂಡಿಯಾ ವಿಮಾನದಲ್ಲಿದ್ದ ಪ್ರಯಾಣಿಕರನ್ನು ತಪಾಸಣೆಗೊಳಪಡಿಸಿದ ವೇಳೆ ಈ ಬೃಹತ್ ಪ್ರಮಾಣದ ಚಿನ್ನ ಪತ್ತೆಯಾಗಿದೆ.

ಭಾನುವಾರ ಸಂಜೆಯಿಂದ ಸೋಮವಾರ ಬೆಳಿಗ್ಗೆವರೆಗೂ ನಡೆದ ಕಾರ್ಯಾಚರಣೆಯಲ್ಲಿ ಒಟ್ಟು 55 ಕೆ.ಜಿ. ಚಿನ್ನ ಪತ್ತೆಯಾಗಿದೆ ಎಂದು ತಿಳಿದುಬಂದಿದ್ದು, ಈ ಸಂಬಂಧ ಒಟ್ಟು 70 ಮಂದಿ ಪ್ರಯಾಣಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ವಿಮಾನ ನಿಲ್ದಾಣಗಳಲ್ಲಿ ಎಷ್ಟೇ ಕಟ್ಟುನಿಟ್ಟಿನ ನಿಗಾ ವಹಿಸಿದ್ದರೂ ಯಾವುದೇ ಅಂಜಿಕೆಯಿಲ್ಲದೇ ಚಿನ್ನ ತೆಗೆದುಕೊಂಡು ಬರುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ.

Write A Comment