ರಾಷ್ಟ್ರೀಯ

ಬಹುದೊಡ್ಡ ಸಂಕಟದಲ್ಲಿ ಸೋನಿಯಾ-ರಾಹುಲ್ ; 1,300 ಕೋಟಿ ರೂ.ದಂಡ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆ ನೋಟಿಸ್ ಜಾರಿ ಮಾಡುವ ಸಾಧ್ಯತೆ

Pinterest LinkedIn Tumblr

rahul_sonia

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸೇರಿದ್ದ 1600 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಕಬಳಿಕೆಗೆ ಸಂಚು ರೂಪಿಸಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿಗೆ 1,300 ಕೋಟಿ ರೂಪಾಯಿ ಬೃಹತ್ ಮೊತ್ತದ ದಂಡ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆ ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಇಂಡಿಯನ್ ಎಕ್ಸ್ ಪ್ರೆಸ್ ವರದಿ ಪ್ರಕಾರ, ಯಂಗ್ ಇಂಡಿಯಾ ಲಿಮಿಟೆಡ್ ನಿಂದ ಆದಾಯ ಗಳಿಸಿರುವ ಪ್ರಕರಣದಲ್ಲಿ ದಂಡ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆ ಸೋನಿಯಾ ಗಾಂಧಿಯವರನ್ನು ನೋಟಿಸ್ ನೀಡಿ ಕೇಳುವ ಸಾಧ್ಯತೆ ಇದೆ ಎಂದು ಹೇಳಿದೆ.

ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಸಾರ್ವಜನಿಕ ಕಂಪನಿಯನ್ನು ಖಾಸಗಿ ಕಂಪನಿಯನ್ನಾಗಿ ಮಾರ್ಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಆರೋಪಿಸಿ ದೂರು ದಾಖಲಿಸಿದ್ದರು.

ಯಂಗ್ ಇಂಡಿಯನ್ ಎಂಬ ಹೆಸರಿನ ಖಾಸಗಿ ಕಂಪನಿ ಸ್ಥಾಪಿಸಿಕೊಂಡಿರುವ ಸೋನಿಯಾ ಮತ್ತು ರಾಹುಲ್ ಇದರ ಮೂಲಕ ಹೆರಾಲ್ಡ್ ಮಾತೃಸಂಸ್ಥೆ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಎಂಬ ಪಬ್ಲಿಕ್ ಕಂಪನಿಯನ್ನು ಖರೀದಿಸಿದ್ದಾರೆ. ಇದಕ್ಕಾಗಿ ಎಐಸಿಸಿ 90 ಕೋಟಿ ರೂ. ಸಾಲವನ್ನು ಯಾವುದೇ ಭದ್ರತೆಯಿಲ್ಲದೆ ಯಂಗ್ ಇಂಡಿಯನ್‌ಗೆ ನೀಡಿದೆ. ವಾಣಿಜ್ಯ ಉದ್ದೇಶಗಳಿಗಾಗಿ ರಾಜಕೀಯ ಪಕ್ಷವೊಂದು ಸಾಲ ನೀಡುವುದು ಆದಾಯ ತೆರಿಗೆ ಕಾಯ್ದೆ ಅಡಿಯಲ್ಲಿ ಕಾನೂನಿನ ಸ್ಪಷ್ಟ ಉಲ್ಲಂಘನೆ ಎಂದು ಸ್ವಾಮಿ ಆರೋಪಿಸಿದ್ದರು.

ನ್ಯಾಷನಲ್ ಹೆರಾಲ್ಡ್ ಮತ್ತು ಕ್ವಾಮಿ ಆವಾಜ್ ಎಂಬ ವಾರ್ತಾಪತ್ರಿಕೆಗಳ ಒಡೆತನ ಹೊಂದಿದ್ದ ದಿ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಕಂಪನಿ ದಿಲ್ಲಿ ಮತ್ತು ಉತ್ತರಪ್ರದೇಶಗಳಲ್ಲಿ ಕೋಟ್ಯಂತರ ಮೌಲ್ಯದ ಆಸ್ತಿ ಹೊಂದಿದೆ.

ಸುಮಾರು 1,600 ಕೋಟಿ ಮೌಲ್ಯದ ದಿಲ್ಲಿಯ ಹೆರಾಲ್ಡ್ ಹೌಸ್ ಕಬಳಿಸಲು ಸೋನಿಯಾ ಹಾಗೂ ರಾಹುಲ್ ಅವರು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಕಂಪನಿಯೊಂದಿಗೆ ಅಕ್ರಮ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು

Write A Comment