ರಾಷ್ಟ್ರೀಯ

ಮುಂಗಾರು ಮಳೆಗೆ ಗುಜರಾತ್ ತತ್ತರ : 45 ಮಂದಿ ಸಾವು

Pinterest LinkedIn Tumblr

Damaged bridgeದೇಶಾದ್ಯಂತ ಮುಂಗಾರು ಮಳೆ ಅಬ್ಬರಿಸುತ್ತಿದ್ದು ಈ ನಡುವೆ ಗುಜರಾತ್ ನಲ್ಲಿ ಗಾಳಿಸಹಿತ ಸುರಿಯುತ್ತಿರುವ ಭಾರೀ ಮಳೆಗೆ ಈಗಾಗಲೇ 45 ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ರಾಜ್ ಕೋಟ್ ಮತ್ತು ಅಮ್ರೇಲಿ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಜನತೆ ಪ್ರವಾಹದಿಂದ ಪಾರಾಗಲು ಹರಸಾಹಸ ಪಡುತ್ತಿದ್ದಾರೆ. ಅಲ್ಲದೇ ರಸ್ತೆ ಸಂಚಾರ ವಿದ್ಯುತ್ ಸೇರಿದಂತೆ ಸಾರ್ವಜನಿಕರ ಅಗತ್ಯ ಸೌಲಭ್ಯ ಬುಡಮೇಲಾಗಿದ್ದು ಈಗಾಗಲೇ ರಕ್ಷಣಾ ಪಡೆ ಸಂತ್ರಸ್ತರ ನೆರವಿಗೆ ಧಾವಿಸಿವೆ.

ಇನ್ನು ಕಣಿವೆ ರಾಜ್ಯ ಕಾಶ್ಮೀರದಲ್ಲಿಯೂ ಸಹ ಅವರುಣನ ಅಬ್ಬರ ಹೆಚ್ಚಿದ್ದು ಕಳೆದ ವರ್ಷದ ರೀತಿಯಲ್ಲೇ ಪ್ರವಾಹ ಸಂಭವಿಸುವ ಭೀತಿ ಎದುರಾಗಿದೆ. ಅಲ್ಲದೇ ಕಾಶ್ಮೀರದ ಜೇಲಂ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ, ಅನಂತ್ ನಾಗ್ ಮತ್ತು ಪುಲ್ವಾಮಾ ಜಿಲ್ಲೆಗಳ ಜನತೆಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದ್ದು ಸುರಕ್ಷಿತ ಸ್ಥಳಗಳಿಗೆ ಅಲ್ಲಿನ ಜನರನ್ನು ಸ್ಥಳಾಂತರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

Write A Comment