ರಾಷ್ಟ್ರೀಯ

ಸುಷ್ಮಾ, ರಾಜೇ, ಇರಾನಿ, ಮುಂಡೆ ರಾಜೀನಾಮೆಗೆ ಎಎಪಿ ಪ್ರತಿಭಟನೆ

Pinterest LinkedIn Tumblr

AAP Protest

ನವದೆಹಲಿ, ಜೂ.29: ಲಲಿತ್‌ಮೋದಿ ಹಗರಣದಲ್ಲಿ ಭಾಗಿಗಳಾಗಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ, ನಕಲಿ ಪದವಿ ಹಗರಣದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಅಕ್ರಮ ಎಸಗಿರುವ ಮಹಾರಾಷ್ಟ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಪಂಕಜ್ ಮುಂಡೆ ಅವರನ್ನು ಅವರ ಸ್ಥಾನದಿಂದ ಕೈ ಬಿಡುವಂತೆ ಆಗ್ರಹಿಸಿ ಆಮ್ ಆದ್ಮಿ ಪಾರ್ಟಿ (ಎಎಪಿ) ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದ್ದಾರೆ.

ಈ ಹಗರಣಗಳು ನಡೆದು ವಾರಗಳೇ ಕಳೆದಿದ್ದರೂ ಪ್ರಧಾನಿ ಮೋದಿ ಅವರು ಈ ಬಗ್ಗೆ ಯಾವುದೇ ಕ್ರಮವನ್ನೂ ಕೈಗೊಳ್ಳದೆ ಮೌನಕ್ಕೆ ಶರಣಾಗಿರುವುದು ಭ್ರಷ್ಟರಿಗೆ ರಕ್ಷಣೆ ನೀಡಿದಂತಾಗಿದೆ ಎಂದು ಎಎಪಿ ನಾಯಕಿ ಅಲಕಾ ಲಾಂಬಾ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಭ್ರಷ್ಟಾಚಾರ ರಹಿತ, ಪಾರದರ್ಶಕ ಆಡಳಿತ ನೀಡುವ ಆಶ್ವಾಸನೆ ನೀಡುವ ಪ್ರಧಾನಿ ನರೇಂದ್ರ ಮೋದಿ ಈಗ ಈ ಮಹಿಳೆಯರ ರಕ್ಷಣೆಗೆ ನಿಂತಿದ್ದಾರೆ. ಇದು ಭ್ರಷ್ಟಾಚಾರ ಮುಕ್ತ ರಾಷ್ಟ್ರದ ಕಲ್ಪನೆಗೆ ಸಂಪೂರ್ಣ ವಿರೋಧವಾಗಿದೆ ಎಂದು ಅವರು ಹೇಳಿದ್ದಾರೆ.

ದೆಹಲಿಯ ಜಂತರ್-ಮಂತರ್‌ನಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅಲಕಾ ಲಾಂಬಾ, ವಿರೋಧ ಪಕ್ಷಗಳ ಪ್ರತಿಭಟನೆ ಹೊರತಾಗಿಯೂ ಸುಷ್ಮಾ ಸ್ವರಾಜ್ ಮತ್ತು ವಸುಂದರಾ ರಾಜೆ ಅವರ ರಾಜೀನಾಮೆ ಪಡೆಯದ ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು. ಕೇಂದ್ರ, ಮಹಾರಾಷ್ಟ್ರ ಹಾಗೂ ರಾಜಸ್ಥಾನಗಳಲ್ಲಿ ಕಾಂಗ್ರೆಸ್ ಮತ್ತಿತರೆ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದರೂ ಬಿಜೆಪಿ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಅಲಕಾ ಲಾಂಬಾ ಆರೋಪಿಸಿದ್ದಾರೆ.

Write A Comment