ರಾಷ್ಟ್ರೀಯ

ಬಿಸಿಯೂಟ ಸೇವಿಸಿ 100 ವಿದ್ಯಾರ್ಥಿಗಳು ಅಸ್ವಸ್ಥ

Pinterest LinkedIn Tumblr

MidDayMealಪಾಟ್ನಾ: ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಬಿಹಾರದ ಮಧುಬಾನಿ ಜಿಲ್ಲೆಯಲ್ಲಿ ನಡೆದಿದೆ.

ಝಾಂಝಪುರ್ ನ ಭವನಾಥ್ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮಧ್ಯಾಹ್ನ ನೀಡುವ ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡಿದ್ದಾರೆ ಎಂದು ಜಿಲ್ಲೆಯ ಅಧಿಕಾರಿ ಜಗದೀಶ್ ಕುಮಾರ್ ತಿಳಿಸಿದ್ದಾರೆ.

ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಊಟದಲ್ಲಿತ್ತ ಹಲ್ಲಿ ಬಿದ್ದಿರುವ ಬಗ್ಗೆ ಮಕ್ಕಳು ಮಾಹಿತಿ ನೀಡಿದ್ದಾರೆ. ಆದರೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಮಾತ್ರ ಮಕ್ಕಳ ದೇಹದಲ್ಲಿ ಯಾವುದೇ ರೀತಿಯ ವಿಷದ ಅಂಶ ಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ. ಕಳೆದ ವಾರವಷ್ಟೇ 50 ಮಕ್ಕಳು ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡಿದ್ದರು. ಇದರ ಬೆನ್ನಲ್ಲೇ ಮತ್ತೊಂದು ಘಟನೆ ಸಂಭವಿಸಿದೆ. 2013ರಲ್ಲಿ ಸರನ್ ಜಿಲ್ಲೆಯಲ್ಲಿ ಬಿಸಿಯೂಟ ಸೇವಿಸಿ ಸುಮಾರು 23 ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು.

Write A Comment