ರಾಷ್ಟ್ರೀಯ

ಬಿಜೆಪಿ ಯುವ ನಾಯಕ ವರುಣ್ ಗಾಂಧಿಯೂ ತಮಗೆ ಸಹಾಯ ಮಾಡಲು ಮುಂದಾಗಿದ್ದರು: ಹೊಸ ಬಾಂಬ್ ಸಿಡಿಸಿದ ಮೋದಿ

Pinterest LinkedIn Tumblr

varun-lalit

ನವದೆಹಲಿ: ಐಪಿಎಲ್ ನ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಐಪಿಎಲ್ ಹಗರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಬ್ಬ ರಾಜಕಾರಣಿಯ ಹೆಸರು ಹೇಳಲಾರಂಭಿಸಿದ್ದು, ಬಿಜೆಪಿ ಯುವ ನಾಯಕ ವರುಣ್ ಗಾಂಧಿಯೂ ತಮಗೆ ಸಹಾಯ ಮಾಡಲು ಮುಂದಾಗಿದ್ದರು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಕೆಲ ವರ್ಷಗಳ ಹಿಂದೆ ಲಂಡನ್ ನಲ್ಲಿ ತಮ್ಮನ್ನು ಭೇಟಿ ಮಾಡಿದ್ದ ವರುಣ್ ಗಾಂಧಿ, ಎಲ್ಲವನ್ನೂ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮೂಲಕ ‘ಇತ್ಯರ್ಥ’ಗೊಳಿಸುವುದಾಗಿ ತಿಳಿಸಿದ್ದರು ಎಂದು ಲಲಿತ್ ಮೋದಿ ಹೇಳಿದ್ದಾರೆ. ಎಲ್ಲವನ್ನೂ ಇತ್ಯರ್ಥಗೊಳಿಸುವುದಕ್ಕೆ ಷರತ್ತು ವಿಧಿಸಿದ್ದ ವರುಣ್ ಗಾಂಧಿ 60 ಮಿನಿಯನ್ ಡಾಲರ್ ಬೇಡಿಕೆ ಇಟ್ಟಿದ್ದರು ಎಂದು ಹೇಳಿದ್ದಾರೆ. ಈ ಮೊತ್ತವನ್ನು ಇಟಾಲಿಯಲ್ಲಿರುವ ಸೋನಿಯಾ ಗಾಂಧಿ ಅವರ ಸಹೋದರಿಗೆ ನೀಡಬೇಕೆಂದು ವರುಣ್ ಗಾಂಧಿ ಹೇಳಿದ್ದರು ಎಂದು ಲಲಿತ್ ಮೋದಿ ತಿಳಿಸಿದ್ದಾರೆ.

ಆರೋಪ ನಿರಾಕರಿಸಿದ ವರುಣ್ ಗಾಂಧಿ
ವರುಣ್ ಗಾಂಧಿ ತಮ್ಮನ್ನು ಭೇಟಿ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವುದಕ್ಕೆ ತಮ್ಮ ಬಳಿ ದಾಖಲೆಗಳಿವೆ ಎಂದು ಲಲಿತ್ ಮೋದಿ ತಿಳಿಸಿದ್ದಾರೆ. ಆದರೆ ಲಲಿತ್ ಮೋದಿ ತಮ್ಮ ವಿರುದ್ಧ ಮಾಡಿರುವ ಆರೋಪವನ್ನು ವರುಣ್ ಗಾಂಧಿ ನಿರಾಕರಿಸಿದ್ದಾರೆ. ಲಂಡನ್ ನಲ್ಲಿ ಲಲಿತ್ ಮೋದಿ ಅವರನ್ನು ಭೇಟಿ ಮಾಡಿದ್ದು ನಿಜ ಆದರೆ ಅವರಿಗೆ ಯಾವುದೇ ರೀತಿಯಲ್ಲೂ ಸಹಾಯ ಮಾಡಲು ಮುಂದಾಗಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮ್ಮನ್ನು ರಕ್ಷಿಸಿಕೊಳ್ಳಲು ಅನಾವಶ್ಯಕವಾಗಿ ಲಲಿತ್ ಮೋದಿ ಅನ್ಯರ ಹೆಸರನ್ನು ಎಳೆದುತರುತ್ತಿದ್ದಾರೆ ಎಂದು ವರುಣ್ ಗಾಂಧಿ ಹೇಳಿದ್ದಾರೆ.

Write A Comment