ರಾಷ್ಟ್ರೀಯ

ಬಾಂಬ್‌ ಬೆದರಿಕೆ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ಟರ್ಕಿಶ್‌ ವಿಮಾನ ತುರ್ತು ಭೂಸ್ಪರ್ಶ

Pinterest LinkedIn Tumblr

turkishturkish

ಹೊಸದಿಲ್ಲಿ: ಬಾಂಬ್‌ ಬೆದರಿಕೆ ಹಿನ್ನೆಲೆಯಲ್ಲಿ ಟರ್ಕಿಶ್‌ ಏರ್‌ಲೈನ್ಸ್‌ ವಿಮಾನ ದಿಲ್ಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ತುರ್ತು ಭೂಸ್ಪರ್ಶ ಮಾಡಿದೆ.

ವಿಮಾನದಲ್ಲಿ ಯಾವುದೇ ಸ್ಫೋಟಕಗಳು ಪತ್ತೆ ಆಗಿಲ್ಲ. ಎಲ್ಲ 148 ಪ್ರಯಾಣಿಕರನ್ನು ವಿಮಾನದಿಂದ ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ.

ಬ್ಯಾಂಕಾಕ್‌ನಿಂದ ಇಸ್ತಾನ್‌ಬುಲ್‌ಗೆ ಪ್ರಯಾಣ ಬೆಳೆಸಿದ್ದ ವಿಮಾನದ ಶೌಚಾಲಯದ ಕನ್ನಡಿ ಮೇಲೆ ‘ಬಾಂಬ್‌ ಇನ್ ಕಾರ್ಗೊ ಹೋಲ್ಡ್‌’ ಎಂದು ಬರೆದಿದ್ದನ್ನು ಸಿಬ್ಬಂದಿ ಗಮನಿಸಿದ ನಂತರ ವಿಮಾನ ತುರ್ತು ಭೂ ಸ್ಪರ್ಶ ಮಾಡಿದೆ.

ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದ್ದು, ರಾಷ್ಟ್ರೀಯ ಭದ್ರತಾ ಪಡೆ ಸೇರಿದಂತೆ ಎಲ್ಲ ಭದ್ರತಾ ಸಂಸ್ಥೆಗಳು ಕಟ್ಟೆಚ್ಚರವಹಿಸಿವೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಪ್ರತ್ಯೇಕವಾಗಿ ಇರಿಸಿ ತಪಾಸಣೆ ನಡೆಸಲಾಗಿದೆ.

Write A Comment