ರಾಷ್ಟ್ರೀಯ

ಹೊಲಕ್ಕೆ ಹೋದ ಬಾಲಕಿಯ ಮೇಲೆ ನಾಲ್ವರು ಕಾಮುಕರಿಂದ ಅತ್ಯಾಚಾರ

Pinterest LinkedIn Tumblr

1725GANG RAPEಉತ್ತರ ಪ್ರದೇಶ ಅಕ್ಷರಶಃ ಅತ್ಯಾಚಾರ ರಾಜ್ಯವಾಗಿ ಮಾರ್ಪಡುತ್ತಿದ್ದು ಇದಕ್ಕೆ ಸಾಕ್ಷಿ ಎಂಬಂತೆ ಹದಿನಾಲ್ಕು ವರ್ಷದ ಅಪ್ರಾಪ್ತ ಬಾಲಕಿಯನ್ನು ನಾಲ್ವರು ಕಾಮುಕರು ಅಮಾನವೀಯವಾಗಿ ಅತ್ಯಾಚಾರವೆಸಗಿದ ಪ್ರಕರಣ ನಡೆದಿದೆ.

ಸೋಮವಾರ ಬೆಳಿಗ್ಗೆ ಹೊಲಕ್ಕೆ ತೆರಳುತ್ತಿದ್ದ ಬಾಲಕಿಯನ್ನು ಕಾಮುಕರು ಅಡ್ಡಗಟ್ಟಿ ನಿರ್ಜನ ಪ್ರದೇಶವೊನ್ದಕ್ಕೆ ಎಳೆದೊಯ್ದಿದ್ದು ತದನಂತರ ಆಕೆಯ ಬಾಯಿಗೆ ಬಟ್ಟೆ ತುರುಕಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.

ಅರೆಪ್ರಜ್ಞಾವಸ್ಥ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಪ್ರಾಪ್ತಳನ್ನು ಕಂಡ ಗ್ರಾಮಸ್ಥರು ಬಾಲಕಿಯ ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಿದ್ದು  ಸ್ಥಳಕ್ಕೆ ಬಂದ ಪುತ್ರಿಯ ಸ್ಥಿತಿ ಕಂಡ ಪೋಷಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಂತ್ರಸ್ತ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Write A Comment