ರಾಷ್ಟ್ರೀಯ

ರಾಜಕೀಯ ಪಕ್ಷಗಳನ್ನು ಆರ್‌ಟಿಐ ವ್ಯಾಪ್ತಿಗೆ ಯಾಕೆ ತರಬಾರದು? : ಕೇಂದ್ರಕ್ಕೆ ಸುಪ್ರೀಂಕೋರ್ಟ್

Pinterest LinkedIn Tumblr

su

ನವದೆಹಲಿ: ದೇಶದ ಜನತೆಯ ಮುಂದೆ ಪಾರದರ್ಶಕವಾಗಿರಲು ರಾಜಕೀಯ ಪಕ್ಷಗಳನ್ನು ಆರ್‌ಟಿಐ ವ್ಯಾಪ್ತಿಗೆ ಯಾಕೆ ತರಬಾರದು ಎಂದು ಎಲ್ಲಾ ರಾಜಕೀಯ ಪಕ್ಷಗಳು ಸ್ಪಷ್ಟನೆ ನೀಡಲಿ ಎಂದು ಸುಪ್ರೀಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಮುಖ್ಯನ್ಯಾಯಮೂರ್ತಿ ಎಚ್‌.ಎಲ್.ದತ್ತು ನೇತೃತ್ವದ ನ್ಯಾಯಪೀಠ ಬಿಜೆಪಿ, ಕಾಂಗ್ರೆಸ್, ಬಿಎಸ್‌ಪಿ, ಸಿಪಿಐ ಮತ್ತು ಸಿಪಿಎಂ ಎಲ್ಲಾ ರಾಷ್ಟ್ರಮಟ್ಟದ ಆರು ಪಕ್ಷಗಳಿಗೆ ನೋಟಿಸ್ ಜಾರಿ ಮಾಡಿ ಆದೇಶ ಹೊರಡಿಸಿದೆ.

ರಾಜಕೀಯ ಪಕ್ಷಗಳನ್ನು ಆರ್‌ಟಿಐ ವ್ಯಾಪ್ತಿಗೆ ತರುವ ಕುರಿತಂತೆ ಅಭಿಪ್ರಾಯಗಳನ್ನು ತಿಳಿಸಿ ಎಂದು ಕೇಂದ್ರ ಸರಕಾರ ಮತ್ತು ಚುನಾವಣೆ ಆಯೋಗಕ್ಕೆ ಕೂಡಾ ಸುಪ್ರೀಂ ನೋಟಿಸ್ ಹೊರಡಿಸಿದೆ.

ಎನ್‌ಜಿಓ ಸಂಸ್ಥೆಯೊಂದು ರಾಜಕೀಯ ಪಕ್ಷಗಳನ್ನು ಆರ್‌ಟಿಐ ವ್ಯಾಪ್ತಿಗೆ ತರಬೇಕು ಎಂದು ಕೋರಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಕೇಂದ್ರ ಸರಕಾರ ಹಾಗೂ ರಾಷ್ಟ್ರಮಟ್ಟದ ರಾಜಕೀಯ ಪಕ್ಷಗಳಿಗೆ ನೋಟಿಸ್ ಜಾರಿ ಮಾಡಿದೆ.

Write A Comment