ರಾಷ್ಟ್ರೀಯ

49 ಜೀವಗಳನ್ನು ಬಲಿ ಪಡೆದ ವ್ಯಾಪಂ ಹಗರಣ ಸಿಬಿಐಗೆ

Pinterest LinkedIn Tumblr

Suprem-court

ನವದೆಹಲಿ, ಜು.9-ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ವ್ಯಾಪಂ ಹಗರಣದ ಎಲ್ಲಾ ಪ್ರಕರಣಗಳ ತನಿಖೆಯನ್ನು ಕೇಂದ್ರೀಯ ತನಿಖಾ ಸಂಸ್ಥೆಗೆ (ಸಿಬಿಐ)ವಹಿಸಲು ಆದೇಶಿಸಿದ ಸರ್ವೋಚ್ಚ ನ್ಯಾಯಾ ಲಯ, ಕೇಂದ್ರ ಸರ್ಕಾರ, ಮಧ್ಯಪ್ರದೇಶ ರಾಜ್ಯ ಸರ್ಕಾರ, ರಾಜ್ಯಪಾಲರಿಗೆ ನೋಟೀಸ್ ಜಾರಿ ಮಾಡಿದೆ.

ವ್ಯಾಪಂ ಹಗರಣಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನೂ ವಿಶೇಷ ತನಿಖಾ ತಂಡ(ಎಸ್‌ಐಟಿ)ದಿಂದ ಸಿಬಿಐಗೆ ವಹಿಸಿಕೊಡುವಂತೆ ಸುಪ್ರೀಂಕೋರ್ಟ್ ಇಂದು ಆದೇಶ ನೀಡಿತು. ರಾಜ್ಯಪಾಲ ರಾಮ್‌ನರೇಶ್ ಯಾದವ್ ಅವರೂ ಕೂಡ ಹಗರಣದಲ್ಲಿ ಭಾಗಿಯಾಗಿರುವುದರಿಂದ ಅವರನ್ನೂ ವಜಾ ಮಾಡಬೇಕು ಎಂದು ಕೋರಿದ್ದ ಅರ್ಜಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ    ನೇತೃತ್ವದ ಎಚ್.ಎಲ್.ದತ್ತು ಪೀಠ ಈ ಆರೋಪಕ್ಕೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ, ಮಧ್ಯಪ್ರದೇಶ ಸರ್ಕಾರ ಹಾಗೂ ಮಧ್ಯಪ್ರದೇಶ ರಾಜ್ಯಪಾಲ ರಾಮ್‌ನರೇಶ್ ಯಾದವ್ ಅವರಿಗೆ ನೋಟೀಸ್ ಜಾರಿ ಮಾಡಿತು.

Write A Comment