ರಾಷ್ಟ್ರೀಯ

ಏರೊಬ್ರಿಜ್‌ಗೆ ಗೋ ಏರ್ ವಿಮಾನ ಡಿಕ್ಕಿ: ತಪ್ಪಿದ ಭಾರೀ ದುರಂತ

Pinterest LinkedIn Tumblr

Chennai-Airportಚೆನ್ನೈ: ಸುಮಾರು 168 ಪ್ರಯಾಣಿಕರನ್ನು ಹೊತ್ತ ‘ಗೋಏರ್‌’ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನ ಏರೊಬ್ರಿಜ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಚೆನ್ನೈ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ಅದೃಷ್ಟವಶಾತ್ ಯಾವುದೇ ದೊಡ್ಡ ಹಾನಿ ಸಂಭವಿಸಿಲ್ಲ.

ಸುರಕ್ಷಿತವಾಗಿ ಲ್ಯಾಂಡ್ ಆದ ವಿಮಾನ ಏರೊಬ್ರಿಜ್ ಕಡಗೆ ಬರುವ ವೇಳೆ ಡಿಕ್ಕಿ ಹೊಡೆದಿದ್ದು, ಘಟನೆಯಿಂದ ವಿಮಾನದ ಕೆಲ ಭಾಗಕ್ಕೆ ಹಾನಿಯಾಗಿದೆ. ಅದನ್ನು ಹೊರತು ಪಡಿಸಿ ಪ್ರಯಾಣಿಕರು ಸೇರಿದಂತೆ ವಿಮಾನದಲ್ಲಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈನಿಂದ ಹೊರಟಿದ್ದ ವಿಮಾನ ಚೆನ್ನೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಈ ದುರ್ಘಟನೆ ಸಂಭವಿಸಿದೆ. ವಿಮಾನದ ಒಂದು ಭಾಗದ  ಜತೆಗೆ ಏರೊಬ್ರಿಜ್‌ ಕೂಡಾ ಹಾನಿಗೊಳಗಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.

Write A Comment