ರಾಷ್ಟ್ರೀಯ

ಹಿಮಾಚಲಪ್ರದೇಶ: ನದಿಗೆ ಉರುಳಿದ ಬಸ್, 6 ಸಾವು

Pinterest LinkedIn Tumblr

bus23ಕುಲ್ಲು: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಗುರುವಾರ ಖಾಸಗಿ ಟೂರಿಸ್ಟ್ ಬಸ್‌ವೊಂದು ನದಿಗೆ ಉರುಳಿ ಬಿದ್ದ ಪರಿಣಾಮ ಆರು ಪ್ರಯಾಣಿಕರು ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಜಾಬ್‌ನ ಬರ್ನಾಲ ನಗರದಿಂದ ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಪಾರ್ವತಿ ನದಿಗೆ ಉರುಳಿ ಬಿದ್ದಿದೆ. ಬಸ್ಸಿನಲ್ಲಿ ಸುಮಾರು 50-55 ಜನ ಪ್ರಯಾಣಿಸುತ್ತಿದ್ದರು ಎನ್ನಲಾಗುತ್ತಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭುಂತರ್-ಮಣಿಕರನ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಈಗಾಗಲೇ ನದಿಯಿಂದ ಆರು ಮೃತದೇಹಗಳನ್ನು ಹೊರ ತೆಗೆಯಲಾಗಿದು ಮತ್ತು ರಕ್ಷಣಾ ಕಾರ್ಯ ಮುಂದುವರೆದಿದೆ ಎಂದು ಭುಂತರ್ ಜಿಲ್ಲಾಧಿಕಾರಿ ರಾಕೇಶ್ ಕನ್ವಾರ್ ಅವರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

Write A Comment