ರಾಷ್ಟ್ರೀಯ

ಬಾಲಕನ ಮೊಬೈಲ್ ಕಿರುಕುಳಕ್ಕೆ ಬೇಸತ್ತ 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

Pinterest LinkedIn Tumblr

mob

ಥಾಣೆ: 15 ವರ್ಷದ ಬಾಲಕ ನೀಡುತ್ತಿದ್ದ ಕಿರುಕುಳದಿಂದ ಮನನೊಂದ 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಹಾರಾಷ್ಟ್ರದ ಥಾಣೆಯಲ್ಲಿ ಈ ಘಟನೆ ನಡೆದಿದ್ದು ಬಾಲಕನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ತನ್ನ ಸಂಬಂಧಿಕರ ಮನೆಯಲ್ಲಿದ್ದುಕೊಂಡು 10 ತರಗತಿಯೊಂದಿಗೆ ಕಂಪ್ಯೂಟರ್ ಕೋರ್ಸ್ ಸಹ ಕಲಿಯುತ್ತಿದ್ದಳು ಎಂದು ತಿಳಿದುಬಂದಿದೆ.

ಶಹಾಪುರ ತಾಲೂಕಿನ ಯುವಕನೊಬ್ಬ ವಿದ್ಯಾರ್ಥಿನಿಯ ನಂಬರ್ ಪಡೆದು ಕರೆ ಮಾಡಿ ಕಿರುಕುಳ ನೀಡುತ್ತಿದ್ದ ವಿಷಯ ಆತ್ಮಹತ್ಯೆ ಮಾಡಿಕೊಂಡ ಹಲವು ದಿನಗಳ ಬಳಿಕ ಬೆಳಕಿಗೆ ಬಂದಿದೆ. ಇದಕ್ಕೂ ಮುನ್ನ ಅಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಈಗ ಕಿರುಕುಳ ನೀಡಿದ್ದ ಯುವಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯುವತಿ ಆತ್ಮಹತ್ಯೆ ಮಾಡಿಕೊಂಡ ಹಲವು ದಿನಗಳ ಬಳಿಕ, ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ವಿಷಯ ಪೋಷಕರಿಗೆ ತಿಳಿದಿದೆ. ದೂರವಾಣಿ ಮೂಲಕ ಪದೇ ಪದೇ ಪೀಡಿಸುತಿದ್ದ ಯುವಕನ ವಿರುದ್ಧ ಸೆಕ್ಷನ್ 306 , 507 ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Write A Comment