ರಾಷ್ಟ್ರೀಯ

ಯಕೂಬ್ ಮೆಮೋನ್‌ನ ಗಲ್ಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ

Pinterest LinkedIn Tumblr

yakuನವದೆಹಲಿ, ಜು.28-ಮುಂಬೈ ಸರಣಿ ಸ್ಫೋಟದ ರೂವಾರಿ ಯಕೂಬ್ ಮೆಮೋನ್‌ನ  ಗಲ್ಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ಈ ಮಹತ್ವದ ಆದೇಶ ನೀಡಿದೆ.

1993ರಲ್ಲಿ ಮುಂಬೈನಲ್ಲಿ ನಡೆದ ಉಗ್ರರ ಸರಣಿ ಸ್ಫೋಟದಿಂದ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಅನೇಕ ನಾಗರಿಕರು ಮೃತಪಟ್ಟು ಕೆಲವರು ಗಾಯಗೊಂಡಿದ್ದರು.

ತನಗೆ ಗಲ್ಲು ಶಿಕ್ಷೆ ವಿಧಿಸಿದ್ದನ್ನು ಪ್ರಶ್ನಿಸಿ ಮೆಮೋನ್ ಸುಪ್ರೀಂಕೋರ್ಟ್‌ಗೆ ಮೊರೆ ಹೋಗಿದ್ದ ಹಾಗೂ ಮಹಾರಾಷ್ಟ್ರ ರಾಜ್ಯಪಾಲರಿಗೂ ತನ್ನ ಗಲ್ಲು ಶಿಕ್ಷೆಗೆ ತಡೆ ನೀಡಬೇಕೆಂದು ಮನವಿ ಮಾಡಿಕೊಂಡಿದ್ದ.

Write A Comment