ನವದೆಹಲಿ: ಹಳದಿ ಲೋಹ ಪ್ರಿಯರಿಗೊಂದು ಸಂತಸದ ಸುದ್ದಿ ಇಲ್ಲಿದೆ. ಇನ್ನು ಕೆಲ ತಿಂಗಳ ಬಳಿಕ ಚಿನ್ನದ ದರ ಪ್ರತಿ 10 ಗ್ರಾಂ ಗೆ 20,500 ದವರೆಗೂ ಇಳಿಕೆಯಾಗಲಿದೆ ಎನ್ನಲಾಗಿದೆ.
ಅಮೆರಿಕಾದ ಕೇಂದ್ರ ಬ್ಯಾಂಕ್ ಮುಂದಿನ ತಿಂಗಳುಗಳಲ್ಲಿ ಬಡ್ಡಿ ದರ ಏರಿಕೆ ಮಾಡುವ ನಿರೀಕ್ಷೆಯಿದ್ದು, ಇದು ಭಾರತದ ಚಿನಿವಾರ ಪೇಟೆಯ ಮೇಲೂ ಪರಿಣಾಮ ಬೀರಲಿದೆ ಎಂದು ತಿಳಿಸಿರುವ ಇಂಡಿಯಾ ರೇಟಿಂಗ್ ಅಂಡ್ ರೀಸರ್ಚ್ ಸಂಸ್ಥೆ ಈ ಕಾರಣಕ್ಕಾಗಿ ಚಿನ್ನದ ಬೆಲೆಯಲ್ಲಿ ಇಳಿಕೆ ಕಾಣಲಿದೆ ಎಂದು ಭವಿಷ್ಯ ನುಡಿದಿದೆ.
ಅಮೆರಿಕಾ ಕೇಂದ್ರ ಬ್ಯಾಂಕ್ ಬಡ್ಡಿ ದರ ಏರಿಕೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆ ತಗ್ಗಲಿದೆ. ಹೀಗಾಗಿ ಭಾರತದಲ್ಲಿ ಚಿನ್ನದ ಧಾರಣೆ ಐದು ವರ್ಷಗಳ ಹಿಂದಿನ ಮಟ್ಟಕ್ಕೆ ಅಂದರೆ 20,500 ಮತ್ತು 24,000 ರೂ. ಗಳ ಅಸುಪಾಸಿನಲ್ಲಿರುವ ಸಾಧ್ಯತೆಯಿದೆ ಎಂದು ಸಂಸ್ಥೆ ಹೇಳಿದೆ.