15 ವರ್ಷದ ಮಗಳ ಮೇಲೆಯೇ ಕಾಮುಕ ತಂದೆಯೊಬ್ಬ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯಾಗಿಸಿದ ಅಮಾನವೀಯ ಘಟನೆ ಅಗರ್ತಲಾದಲ್ಲಿ ನಡೆದಿದೆ.
ಹೌದು. ಇಲ್ಲಿನ ಅಮತಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಬಜೇಂದ್ರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಬಾಲಕಿಯ ದೇಹದಲ್ಲಾದ ಬದಲಾವಣೆಯನ್ನು ನೋಡಿದ ಶಾಲಾ ಶಿಕ್ಷಕರು ಬಾಲಕಿಯನ್ನು ಪ್ರಶ್ನಿಸಿದ್ದು ಆ ಸಮಯದಲ್ಲಿ ಬಾಲಕಿ ಸತ್ಯವನ್ನು ಬಾಯ್ಬಿಟ್ಟಿಲ್ಲ. ಇದರಿಂದ ಆತಂಕಗೊಂಡ ಶಿಕ್ಷಕರು ಆಕೆಯ ಮನೆಗೆ ತೆರಳಿ ಸತ್ಯ ಹೇಳುವಂತೆ ಒತ್ತಡ ಹೇರಿದ್ದು ಆಗ ತನ್ನ ತಂದೆ ಮಾಡಿದ ನೀಚ ಕೃತ್ಯದ ಕುರಿತಾಗಿ ಬಾಯ್ಬಿಟ್ಟಿದ್ದಾಳೆ. ಈ ವಿಚಾರ ತಿಳಿದ ಗ್ರಾಮಸ್ಥರು ಆರೋಪಿಯನ್ನು ಹಿಗ್ಗಾ ಮುಗ್ಗಾ ಥಳಿಸಿದ್ದು, ಅವರಿಂದ ತಪ್ಪಿಸಿಕೊಂಡ ಕಾಮುಕ ಅಲ್ಲಿಂದ ಪರಾರಿಯಾಗಿದ್ದಾನೆ.
ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ.