ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ದೇಶದ ಆಸ್ತಿ. ಅವರು ರಾಷ್ಟ್ರಕ್ಕೆ ದೇವರು ನೀಡಿದ ಕೊಡುಗೆಯಾಗಿದ್ದಾರಂತೆ.
ಹೀಗೆಂದು ಹೇಳಿದ್ದು ಕೇಂದ್ರ ಸಂಸದೀಯ ವ್ಯವಹಾರ ಹಾಗೂ ನಗರಾಭಿವೃದ್ಧಿ ಖಾತೆ ಸಚಿವ ವೆಂಕಯ್ಯನಾಯ್ಡು. ಕಾಂಗ್ರೆಸ್ ಸುಷ್ಮಾ ಅವರ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಗೆ ದೇಶದ ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲ. ಹಾಗಾಗಿ ಸಂಸತ್ ಕಲಾಪ ಸುಗಮವಾಗಿ ನಡೆಯಲು ಅವಕಾಶ ನೀಡುತ್ತಿಲ್ಲ ಎಂದು ಟೀಕಿಸಿದ್ದಾರೆ.
ಸ್ಪೀಕರ್ ಸುಮಿತ್ರಾ ಮಹಾಜನ್ ಸಂಸದರನ್ನು ಅಮಾನತು ಮಾಡಿರುವ ನಿರ್ಧಾರ ಸರಿಯಾಗಿಯೇ ಇದೆ. ಈ ಹಿಂದೆಯೂ ಹಲವು ಬಾರಿ ಸಂಸದರನ್ನು ಅಮಾನತು ಮಾಡಿರುವ ನಿದರ್ಶನಗಳಿವೆ ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.