ರಾಷ್ಟ್ರೀಯ

ವಿಪಕ್ಷಗಳ ಧ್ವನಿಯನ್ನು ಅಟ್ಟಡಗಿಸಲಾಗುತ್ತಿದೆ: ರಾಹುಲ್ ಗಾಂಧಿ

Pinterest LinkedIn Tumblr

Rahul-Gandhiನವದೆಹಲಿ: ವಿಪಕ್ಷಗಳ ದ್ವನಿಯನ್ನು ಸಂಸತ್ತಿನಲ್ಲಿ ತುಳಿಯಲಾಗುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಲೋಕಸಭಾ ಸ್ಪೀಕರ್ ಕಾಂಗ್ರೆಸ್ಸಿನ ೨೫ ಸಂಸದರನ್ನು ಅಮಾನತುಗೊಳಿಸಿದರ ವಿರುದ್ಧ ಕಾಂಗ್ರೆಸ್ ಮತ್ತು ಇತರ ಪಕ್ಷದ ಸದಸ್ಯರು ಸಂಸತ್ತಿನ ಗಾಂಧಿ ಪ್ರತಿಮೆ ಎದುರು ನಡೆಸುತ್ತಿರುವ ಪ್ರತಿಭಟನೆ ಮೂರನೆ ದಿನ ಮುಂದುವರೆದಿದ್ದು ರಾಹುಲ್ ಅವರು ಈ ಸಂದರ್ಭದಲ್ಲಿ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಈ ಪ್ರತಿಭಟನೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡ ನಿರತರಾಗಿದ್ದಾರೆ. ಹಾಗು ಪ್ರತಿಭಟನಕಾರರು ಭುಜದ ಮೇಲೆ ಸಾಂಕೇತಿಕವಾಗಿ ಕಪ್ಪು ಪಟ್ಟಿ ಧರಿಸಿದ್ದಾರೆ.

ಆರೋಪಿ ಲಲಿತ್ ಮೋದಿ ಅವರಿಗೆ ಸಹಾಯ ಮಾಡಿದ ಆರೋಪದ ಮೇಲೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮತ್ತು ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಹಾಗೂ ವ್ಯಾಪಂ ಹಗರಣದಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅವರ ವಿರುದ್ಧ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಸದಸ್ಯರು ವಾಗ್ದಾಳಿ ಮುಂದುವರೆಸಿದ್ದಾರೆ.

ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾ ನಿರತ ಸಂಸದರು ವಿವಾದದಲ್ಲಿ ಸಿಲುಕಿರುವ ಬಿಜೆಪಿ ಸದಸ್ಯರು ರಾಜಿನಾಮೆ ನೀಡುವವರೆಗೆ ಪ್ರತಿಭಟನೆ ಮುಂದುವರೆಸುವುದಾಗಿ ತಿಳಿಸಿದ್ದಾರೆ.

ಈ ಪ್ರತಿಭಟನೆಗಳಿಗೆ ಸಂಯುಕ್ತ ಜನತಾ ದಳ ಮತ್ತು ರಾಷ್ಟ್ರೀಯ ಜನತಾ ದಳ ಪಕ್ಷಗಳೂ ಕೈಜೋಡಿಸಿವೆ. “ಸ್ಪೀಕರ್ ಅವರ ಈ ನಿರ್ಣಯ ಸರ್ಕಾರ ಮತ್ತು ವಿಕ್ಷಗಳ ನಡುವೆ ಉದ್ವೇಗ ಸೃಷ್ಟಿಸಿದೆ” ಎಂದು ಜೆಡಿಯು ಮುಖಂಡ ಶರದ್ ಯಾದವ್ ತಿಳಿಸಿದ್ದಾರೆ.

Write A Comment