ನವದೆಹಲಿ: ಆಮ್ ಆದ್ಮಿ ಪಕ್ಷದ ಶಾಸಕಿ ಅಲಕಾ ಲಂಬಾ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಕಲ್ಲು ತೂರಾಟ ನಡೆಸಿರುವ ಘಟನೆಯೊಂದು ದೆಹಲಿಯ ರಾಜ್ ಘಾಟ್ ಪ್ರದೇಶದಲ್ಲಿ ಭಾನುವಾರ ನಡೆದಿದೆ.
ಮಾದಕ ವ್ಯಸನ ಕುರಿತಂತೆ ದೆಹಲಿಯ ಕಾಶ್ಮೀರಿ ಗೇಟ್ ಪ್ರದೇಶಕ್ಕೆ ತೆರಳಿದ ಸಂದರ್ಭದಲ್ಲಿ ಆಪ್ ಶಾಸಕಿ ಅಲಕಾ ಲಂಬಾ ಮೇಲೆ ಅಪರಿಚತ ವ್ಯಕ್ತಿಯೊಬ್ಬ ಕಲ್ಲು ತಾರಾಟ ನಡೆಸಿದ್ದಾನೆಂದು ತಿಳಿದುಬಂದಿದೆ. ಘಟನೆ ವೇಳೆ ಶಾಸಕಿಯ ತಲೆಗೆ ತೀವ್ರವಾಗಿ ಪೆಟ್ಟಾಗಿರುವ ಹಿನ್ನಲೆಯಲ್ಲಿ ಶಾಸಕಿಯನ್ನು ಅರುಣಾ ಅಸಫ್ ಅಲಿ ಆಸ್ಪತ್ರೆ ದಾಖಲಿಸಲಾಗಿದೆ.
ದಾಳಿ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅಲಕಾ ಲಂಬಾ, ಮಾದಕ ವ್ಯಸನ ಕುರಿತಂತೆ ಹೋರಾಟ ನಡೆಸುತ್ತಿದ್ದ ವೇಳೆ ನನ್ನ ಮೇಲೆ ಅಪರಿಚತ ವ್ಯಕ್ತಿಯೊಬ್ಬ ದಾಳಿ ನಡೆಸಿದನು. ಅಪರಿಚತ ವ್ಯಕ್ತಿ ಕಲ್ಲು ತೂರಾಟ ನಡೆಸುತ್ತಿದ್ದರು ಸ್ಥಳಿದಲ್ಲಿದ್ದ ಪೊಲೀಸರು ಮಧ್ಯ ಪ್ರವೇಶಿಸಿ ಕ್ರಮ ಕೈಗೊಳ್ಳದೇ ಸುಮ್ಮನೆ ನಿಂತಿದ್ದರು ಎಂದು ಆರೋಪಿಸಿದ್ದಾರೆ. ಅಲ್ಲದೆ, ದಾಳಿಯಿಂದ ಯಾವುದೇ ಕಾರಣಕ್ಕೂ ನನ್ನ ಹೋರಾಟವನ್ನು ಹಿಂಪಡೆಯುವುದಿಲ್ಲ. ಮಾದಕ ವ್ಯಸನ ವಿರೋಧ ಕುರಿತಂತೆ ನನ್ನ ಹೋರಾಟವನ್ನು ಮುಂದುವರೆಯುತ್ತಲೇ ಇರುತ್ತದೆ ಎಂದು ಹೇಳಿದ್ದಾರೆ.
ಪ್ರಕರಣ ಕುರಿತಂತೆ ಈಗಾಗಲೇ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧನಕ್ಕೊಳಪಡಿಸಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.