ದಮಾಮ್: ಇತ್ತೀಚೆಗೆ ನಿಧನರಾದ ಮಾಜಿ ರಾಷ್ಟ್ರಪತಿ ವಿಶ್ವವಿಖ್ಯಾತ ವಿಜ್ಞಾನಿ ಡಾ.ಎಪಿಜೆ ಅಬ್ದುಲ್ ಕಲಾಂ ರವರಿಗೆ ಗೌರವ ಸಲ್ಲಿಸುವ ಸಲುವಾಗಿ ಇಂಡಿಯನ್ ಸೋಶಿಯಲ್ ಫೋರಮ್ ಕರ್ನಾಟಕ ರಾಜ್ಯ ಘಟಕವು ಸಂತಾಪ ಸಭೆಯನ್ನು ಸೌದಿಅರೇಬಿಯದ ದಮಾಮ್ ನಲ್ಲಿ ನಡೆಸಿತು.
ಸಂತಾಪ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸೋಶಿಯಲ್ ಫೋರಮ್ ರಾಜ್ಯಾಧ್ಯಕ್ಷ ಮುಹಮ್ಮದ್ ಶರೀಫ್, ಡಾ.ಕಲಾಂ ಅವರು ತನ್ನ ವ್ಯಕ್ತಿತ್ವ ಮತ್ತು ಸಾಧನೆಯ ಮೂಲಕ ಭಾರತದ ಕೀರ್ತಿಯನ್ನು ಜಗತ್ತಿಗೆ ಹಬ್ಬಿಸಿದ್ದಾರೆ. ಅವರ ನಿರಂತರ ಪರಿಶ್ರಮ, ದೂರಗಾಮಿ ಚಿಂತನೆಗಳು ಯುವಪೀಳಿಗೆಗೆ ಪ್ರೇರಣೆಯಾಗಬೇಕು ಎಂದರು.
ಸಭೆಯಲ್ಲಿ ಇಂಡಿಯನ್ ಸೋಶಿಯಲ್ ಫೋರಮ್ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಫಯಾಝ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಎಂ.ಆರಿಫ್, ಕಾರ್ಯದರ್ಶಿ ಇಮ್ರಾನ್ ಸೂಫಿ ಸೇರಿದಂತೆ ದಮಾಮ್ , ಜುಬೈಲ್ ಹಾಗೂ ಖೋಬರ್ ವ್ಯಾಪ್ತಿಯ ದ.ಕ. ಮತ್ತು ಉಡುಪಿ ಜಿಲ್ಲಾ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.