ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಾಘಾ ಗಡಿಯಲ್ಲಿ ಸಂಪ್ರದಾಯದಂತೆ ನಡೆಯುತ್ತಿದ್ದ ಭಾರತ ಹಾಗೂ ಪಾಕ್ ನ ಸೇನಾಪಡೆಗಳ ಪರಸ್ಪರ ಸಿಹಿ ಹಂಚಿಕೆಯನ್ನು ಕೈಬಿಡಲು ಭಾರತ ತೀರ್ಮಾನಿಸಿದೆ.
ಕಳೆದ ಒಂದು ತಿಂಗಳಿನಿಂದ ಗಡಿಯಲ್ಲಿ ಅಪ್ರಚೋದಿತ ಗುಂಡಿನ ಚಕಮಕಿ ನಡೆಸುವ ಮೂಲಕ ಇಬ್ಬಗೆ ನೀತಿಯನ್ನು ಪಾಕಿಸ್ತಾನ ಪ್ರದರ್ಶಿಸುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಈಗಾಗಲೇ ಪಾಕಿಸ್ತಾನ ಪದೇ ಪದೇ ಕದನವಿರಾಮ ಉಲ್ಲಂಘಿಸುತ್ತಿದ್ದು ಅದರ ಜತೆಗೆ ಜಮ್ಮು-ಕಾಶ್ಮೀರ ಹಾಗೂ ಪಂಜಾಬ್‌ನಲ್ಲಿ ನಡೆದಿದ್ದ ಉಗ್ರರ ದಾಳಿಗೆ ಪಾಕಿಸ್ತಾನ ಕಾರಣ ಎಂಬುದು ಖಚಿತವಾಗಿದ್ದು, ಹಾಗಾಗಿ ಮೊಂಡುತನವನ್ನು ಪ್ರದರ್ಶನ ಮಾಡುತ್ತಿರುವ ಪಾಕ್ ಜತೆಗೆ ಸಿಹಿ ವಿನಿಮಯ ಮಾಡಿಕೊಳ್ಳುವ ಸಂಪ್ರದಾಯವನ್ನು ಕೈ ಬಿಡಲು ನಿರ್ಧರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.