ರಾಷ್ಟ್ರೀಯ

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವ್ಯಕ್ತಿಗೆ ಗ್ರಾಮಸ್ಥರಿಂದ ಗೂಸಾ

Pinterest LinkedIn Tumblr

vesಯುವತಿಯರನ್ನು ಕರೆತಂದು ವೇಶ್ಯಾವಾಟಿಕೆಗೆ ದೂಡುತ್ತಿದ್ದ ವ್ಯಕ್ತಿಯೊಬ್ಬನಿಗೆ ಸಾರ್ವಜನಿಕರು ಗೂಸಾ ನೀಡಿದ ಘಟನೆ ಪಂಜಾಬ್ ನಲ್ಲಿ ನಡೆದಿದೆ.

ಇಲ್ಲಿನ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದ್ದು ಯುವಕನೊಬ್ಬ ಹಲವು ದಿನಗಳಿಂದ ಬೇರೆ ಬೇರೆ ಯುವತಿಯರ ಜತೆ ಕಾಣಿಸಿಕೊಳ್ಳುತ್ತಿದ್ದ. ಗ್ರಾಮಸ್ಥರು ಕೇಳಿದಾಗ ಅವರು ನನ್ನ ಗೆಳತಿಯರು ಎನ್ನುತ್ತಿದ್ದ ಎನ್ನಲಾಗಿದೆ. ಆದರೆ ಹಲವಾರು ದಿನಗಳಿಂದ ಈತನ ನಡುವಳಿಕೆ ನೋಡಿದ ಗ್ರಾಮಸ್ಥರಿಗೆ ಈತ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾನೆ ಎಂಬ ಅನುಮಾನ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಆತನನ್ನು ಮತ್ತೆ ಪ್ರಶ್ನಿಸಿದ್ದು ಇದರಿಂದ ಆತ ತಪ್ಪಿಸಿಕೊಳ್ಳಲು ಯತ್ನಿಸಿದ ಎನ್ನಲಾಗಿದೆ. ಹಾಗಾಗಿ ಗ್ರಾಮಸ್ಥರೆಲ್ಲ ಸೇರಿ ಆತನನನ್ನು ಮನಬಂದಂತೆ ಥಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Write A Comment