ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ನಗೆ ಬೀರುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದು ಬೆಂಗಳೂರಿನ ಜನತೆಯನ್ನು ಅಭಿನಂದಿಸಿದ್ದಾರೆ.
ಬಿಬಿಎಂಪಿ ಚುನಾವಣೆ ಫಲಿತಾಂಶ ಸಂತಸ ತಂದಿದೆ ಎಂದಿರುವ ಮೋದಿ ಬಿಜೆಪಿ ಮೇಲೆ ಜನರು ವಿಶ್ವಾಸ ಇರಿಸಿಕೊಂಡಿದ್ದು 126 ಕೋಟಿ ಜನರ ಆಶೋತ್ತರ ಈಡೇರಿಸುವುದೇ ನಮ್ಮ ಗುರಿ ಎಂದು ತಿಳಿಸಿದ್ದಾರೆ.
ಮೈಕ್ರೋ ಬ್ಲಾಗಿಂಗ್ ತಾಣ ಬಳಸಿ ಟ್ವೀಟ್ ಮಾಡಿರುವ ಮೋದಿ, ಮಧ್ಯಪ್ರದೇಶ, ರಾಜಸ್ಥಾನ ನಂತರ ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಹ್ಯಾಟ್ರಿಕ್ ಸಾಧಿಸಿದ್ದು ಇದು ಉತ್ತಮ ಆಡಳಿತ ಹಾಗೂ ರಾಜಕೀಯ ಬೆಳವಣಿಗೆಗೆ ಪೂರಕವಾಗಿದೆ ಎನ್ನುವ ಜತೆಗೆ ಬೆಂಗಳೂರಿನ ಮತದಾರರು, ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರಿಗೆ ನನ್ನ ಅಭಿನಂದನೆ ತಿಳಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ.