ರಾಷ್ಟ್ರೀಯ

ಈ ಕಾಯಿಲೆ ನಿಮಗೂ ಇದೆಯಾ..?

Pinterest LinkedIn Tumblr

kayileಕೆಲವರಿಗೆ ನಿದ್ರೆ ಮಾತ್ರೆಗಳನ್ನು ತೆಗೆದುಕೊಳ್ಳದೇ ಹೋದರೆ ನಿದ್ರೆ ಬರುವುದಿಲ್ಲ. ಗುಟ್ಕಾ, ಪಾನ್‍ಪರಾಗ್, ಕುಡಿತ, ಇಸ್ಪೀಟ್, ಸಿಗರೇಟ್, ರೇಸ್ ಮುಂತಾದವುಗಳೆಲ್ಲಾ ಇನ್ನಷ್ಟು ಅಪಾಯಕಾರಿ ವ್ಯಸನಗಳು.  ಆದರೆ ನಿರಾಪಾಯಕಾರಿಯಾದ ವ್ಯಸನಗಳು ಕೆಲವು ಇವೆ. ಉಳಿದವರನ್ನು ಅಷ್ಟಾಗಿ ಕಾಡದೆ ಹೋದರೂ, ಹತ್ತಿರದವರಿಗೆ ತೊಂದರೆ ಕೊಡುತ್ತಲೇ ಇರುತ್ತವೆ. ಅವುಗಳಲ್ಲಿ ಒಂದು ಶಾಪಿಂಗ್. ಅಗತ್ಯವಿದ್ದರೂ, ಇಲ್ಲದೇಹೋದರೂ ಅಗಾಗ್ಗೆ ಶಾಪಿಂಗ್ ಮಾಡದೇ ಹೋದರೆ ಕೆಲವರಿಗೆ ಬದುಕಲಾಗುವುದಿಲ್ಲ.

ಕೆಲವರು ಸುಮ್ಮನೆ ನೋಡಿಕೊ ಳ್ಳುವುದಕ್ಕೊಸ್ಕರವೇ ಅಂಗಡಿಗೆ ಹೋಗುತ್ತಾರೆ. ಇದನ್ನು‘window shopping’ ಎನ್ನುತ್ತಾರೆ. ಮತ್ತೆ ಕೆಲವರು ದುಡ್ಡು ವ್ಯಯಿಸಿ ಅನಗತ್ಯವಾದ ಶಾಪಿಂಗ್ ಮಾಡುತ್ತಾರೆ. ಕೆಲವರು ತಮ್ಮ ಪ್ರತಿಷ್ಠೆಯನ್ನು ಪ್ರದರ್ಶಿಸಲು ಶಾಪಿಂಗ್‍ಗೆ ಹೋಗುತ್ತಾರೆ.  ಹೈದ್ರಾಬಾದ್‍ನಲ್ಲಿ ಒಬ್ಬ ಒಂಟಿ ಶ್ರೀಮಂತ ವ್ಯಕ್ತಿ ಸತ್ತಾಗ ಆತನ ಕೊಠಡಿಯಲ್ಲಿ ಸುಮಾರು 50 ಸೂಟುಗಳು, 25 ಜೊತೆ ಬೂಟುಗಳು ಸಿಕ್ಕಿದ್ದವು.   ವಿಚಿತ್ರವೇನೆಂದರೆ ಅವುಳನ್ನೆಲ್ಲ ಒಮ್ಮೆಯೂ ಕೂಡ  ಉಪಯೋಗಿಸಿರಲಿಲ್ಲ.. ಅವುಗಳ ಸೀಲ್ ಕೂಡ ಓಪನ್ ಆಗಿರಲಿಲ್ಲ…

ಕೆಲವು 20 ವರ್ಷ ತುಂಬಿದ ಹುಡುಗಿಯರಿಗೆ ಯಾವ ಕಾಯಿಲೆಯೂ ಇರುವುದಿಲ್ಲ. ಆದರೆ ಆರೋಗ್ಯ ವ್ಯಸನದಿಂದ ನರಳುತ್ತಿರುತ್ತಾರೆ. ಆರೋಗ್ಯ ಕುರಿತು ಯಾವ ಪತ್ರಿಕೆಯಲ್ಲಿ ಸಣ್ಣ-ಪುಟ್ಟ ಸಲಹೆಗಳೂ ಬಂದರೂ ಅನುಸರಿಸುತ್ತಾರೆ. ಬೆಳಿಗ್ಗೆ ಎದ್ದೊಡನೆ ಶುಂಠಿ ತಿನ್ನುವುದು, ಎಂಟುಗಂಟೆಗೆ ಮುಖಕ್ಕೆ ಅರಿಶಿನ ಹಚ್ಚಿಕೊಳ್ಳುವುದು, ಕಣ್ಣುಗಳ ಮೇಲೆ ಅರ್ಧಗಂಟೆÉ ಸೌತೆಕಾಯಿ ಚೂರುಗಳನ್ನು ಇಟ್ಟುಕೊಳ್ಳುವುದು, ಮಧ್ಯಾಹ್ನ ಕ್ಯಾರೆಟ್ ಚೂರುಗಳು, ಅರ್ಧಗಂಟೆ ಕಾಲ ಬಿಸಿನೀರಿನಲ್ಲಿ ಕಾಲುಗಳನ್ನು ಇಳಿಬಿಡುವುದು, ಮೈಗೆ ಕ್ರೀಂ, ತಲೆಗೆ ನಿಂಬೇರಸ ಅಥವಾ ಮೊಟ್ಟೆ, ಸಾಯಂಕಾಲ ನಾಲ್ಕು ಟೊಮ್ಯಾಟೋ ಹೀಗೆ ಇತಿಮಿತಿಯಿಲ್ಲದೇ  ಪಯೋಗಿಸುತ್ತಿರುತ್ತಾರೆ. ಯಾವುದೇ ಆದರೂ ಮಿತಿ ಇದ್ದರೆ ಒಳಿತು ಮಿತಿ ಮೀರಿದರೆ ಅದನ್ನು ಅಬ್ಸೆಸಿವ್ ಕಂಪಲ್ಸರಿ ಡಿಸಾರ್ಡರ್ ಎನ್ನುತ್ತಾರೆ. ಹೀಗೆ ಅನಾವಶ್ಯಕವಾಗಿ ವ್ಯಯಿಸುವ ಹಣವನ್ನು ಯಾವುದಾದರೂ ಒಂದೊಳ್ಳೆ ಕಾರ್ಯಕ್ಕೆ ಉಪಯೋಗಿಸಬಹುದಲ್ಲವೇ? ಅರ್ಥವಿಲ್ಲದೆ ವ್ಯರ್ಥವಾಗಿ ವ್ಯಯ ಮಾಡಿದರೆ ನಿಮ್ಮ ಅರ್ಥ ವ್ಯವಸ್ಥೆಯೇ ಹಾಳಾಗುವುದು. ಏನು ಬೇಕೋ, ಎಷ್ಟು ಬೇಕೋ ಅಷ್ಟಕ್ಕೆ    ನಿಮ್ಮ ಶಾಪಿಂಗ್ ಮೀಸಲಾಗಿದ್ದರೆ ಒಳ್ಳೆಯದು.

Write A Comment