ಜಲಂಧರ್: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಸಿಖ್ಖ್ ದಂಗೆಗೆ ಸಂಬಂಧಿಸಿದಂತೆ ಅಮೆರಿಕದ ಕೋರ್ಟ್‌ವೊಂದರಲ್ಲಿ ಸಲ್ಲಿಕೆಯಾದ ಅರ್ಜಿ ವಜಾಗೊಂಡಿದೆ.
1984ರಲ್ಲಿ ನಡೆದ ಸಿಖ್ಖ್ ಗಲಭೆಗೆ ಸಂಬಂಧಿಸಿದಂತೆ ಸೋನಿಯಾ ವಿರುದ್ಧ ಸಲ್ಲಿಸಿದ ಮಾನವ ಹಕ್ಕು ಉಲ್ಲಂಘನೆ ಆರೋಪದ ಅರ್ಜಿಯನ್ನು, ಸಾಕ್ಷ್ಯಾಧಾರಗಳ ಕೊರತೆಯ ಕಾರಣದಿಂದ ಇಲ್ಲಿನ ಜಿಲ್ಲಾ ನ್ಯಾಯಾಲಯ ವಜಾಗೊಳಿಸಿತ್ತು. ಇದನ್ನು ಪಶ್ನಿಸಿ ಸಿಖ್ಸ್ ಫಾರ್ ಜಸ್ಟೀಸ್ ಎಂಬ ಸಂಘಟನೆ, ಅಮೆರಿಕ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ನಂತರ ನಡೆದ ಸಿಖ್ಖ್ ವಿರೋಧಿ ದಂಗೆಯಲ್ಲಿ ಸಿಖ್ ಸಮುದಾಯದ ಅನೇಕರು ಮೃತಪಟ್ಟಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಸಿಖ್ ಸಂಘಟನೆ ವಿಶೇಷ ಕಾಯ್ದೆಗಳಡಿ ಸೋನಿಯಾ ಗಾಂಧಿ ಪರ ನೀಡಿದ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಅಮೆರಿಕದ ನ್ಯಾಯಾಲಯದಲ್ಲಿ ಪ್ರಶ್ನಿಸಿತ್ತು.